ಆಯಾ ತಪ್ಪಿದ ಕಾಂಗ್ರೆಸ್ ಪಕ್ಷದ ಲೆಕ್ಕಾಚಾರ

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಅಸಾದಿ ಗೈರು - ಗೀತಾ ಹಾಜರ್


ಶಿಷ್ಟಾಚಾರ ಉಲ್ಲಂಘನೆ ಹಿನ್ನಲೆಯಲ್ಲಿ ತೀರ್ಥಹಳ್ಳಿಯ ಬಿಇಓ ಕಚೇರಿ ಮುಂಭಾಗ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಗೈರಾಗಿದ್ದರು. ಉಪಾಧ್ಯಕ್ಷೆ ಗೀತಾ ರಮೇಶ್ ಹಾಜರಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇವೆರಡು ವಿಚಾರಗಳು ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಗೀಡಾಗಿದ್ದು ಪಟ್ಟಣದ ಆಡಳಿತದ ಬಗ್ಗೆ ಗುಸು ಗುಸು ಆರಂಭಗೊಂಡಿದೆ.

ಕೇಂದ್ರ ಸರ್ಕಾರದ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಹಂಚಿಕೆಯಾದ ಶಾಲಾ ಬ್ಯಾಗ್ ಮತ್ತು ಸ್ವೆಟರ್ ವಿತರಣೆ ಕಾರ್ಯಕ್ರಮ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಯಶಸ್ವಿಯಾಗಿ ನಡೆಯಿತು. ಶಾಸಕ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ ಇಬ್ಬರ ಜೊತೆಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಹಮತ್ ಉಲ್ಲಾ ಅಸಾದಿ ಭಾಗಿಯಾಗಿದ್ದರು. ಸಂಸದರ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ಅಸಾದಿಯೊಂದಿಗೆ ಉಪಾಧ್ಯಕ್ಷೆ ಗೀತಾ ರಮೇಶ್ ಕೂಡ ಹಾಜರಿದ್ದರು. ಅಲ್ಲದೇ ಸಂಸದರನ್ನು ಪಟ್ಟಣ ಪಂಚಾಯಿತಿಗೆ ಕರೆಸಿಕೊಂಡು ಸನ್ಮಾನಿಸಿ ವಿವಿಧ ಬೇಡಿಯನ್ನು ಸಲ್ಲಿಸಿದ್ದರು.

ಅದೇ ಕಾರ್ಯಕ್ರಮದ ವಿರುದ್ಧ ಕಾಂಗ್ರೆಸ್ ಪಕ್ಷ ಶಿಷ್ಟಾಚಾರದ ವಿಷಯ ಮುಂದಿಟ್ಟುಕೊಂಡು ಸೋಮವಾರ ಪ್ರತಿಭಟನೆ ನಡೆಸಿದೆ. ಆದರೆ ಅಸಾದಿ ಕಾರ್ಯಕ್ರಮಕ್ಕೆ ಗೈರಾಗಿ ಗೀತಾ ಹಾಜರಾಗಿರುವ ಕುರಿತು ಪಕ್ಷದೊಳಗಿನ ಹಲವು ಊಹಾಪೋಹಗಳಿಗೆ ಪುಷ್ಟಿ ನೀಡಿದಂತಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post