ಪ್ರಭಾವಿ ಜೆಡಿಎಸ್ ಮುಖಂಡ ಮಡಬೂರು ರಾಜೇಂದ್ರ ನಿಧನ

ಮಾಜಿ ಜನತಾದಳ ರಾಜ್ಯ ಉಪಾಧ್ಯಕ್ಷರಾಗಿದ್ದ ರಾಜೇಂದ್ರ

ಹಿರಿಯ ಜೆಡಿಎಸ್ ಪ್ರಭಾವಿ ಮುಖಂಡ, ಮಾಜಿ ರಾಜ್ಯ ಜನತಾದಳ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎನ್ ಆರ್ ಪುರ ತಾಲ್ಲೂಕಿನ ಮಡಬೂರು ರಾಜೇಂದ್ರ (70) ಭಾನುವಾರ ನಿಧನರಾದರು. 2004ರಲ್ಲಿ ಶೃಂಗೇರಿ ತಾಲ್ಲೂಕಿನ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮಲೆನಾಡ ಗಾಂಧಿ ಗೋವಿಂದೇಗೌಡರ ಜೊತೆ ನಿಕಟವರ್ತಿಯಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ,‌ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು ಶೃಂಗೇರಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಿದ್ದರು. ನಿರಂತರ ಹೋರಾಟದ ಮೂಲಕ ಜನಪರ ಚಳವಳಿ ಕಟ್ಟುತ್ತಿದ್ದರು. ಸಾಮಾಜಿಕ ನ್ಯಾಯ, ಸಮಾಜವಾದಿ ಸಿದ್ಧಾಂತವನ್ನು ನಂಬಿ ಬಂದಿದ್ದ ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post