ಶನಿವಾರ ಶಾಲಾ ಕಾಲೇಜಿಗೆ ರಜಾ ಘೋಷಣೆ
ತೀರ್ಥಹಳ್ಳಿ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಶುಕ್ರವಾರ 163 ಮಿಲಿ ಮೀಟರ್ ಮಳೆ ಆಗುಂಬೆಯಲ್ಲಿ ದಾಖಲಾಗಿದೆ. ಅತಿಯಾದ ಶೀತ ವಾತಾವರಣ ಸೃಷ್ಟಿಯಾಗಿದ್ದು ಮುಂಜಾಗ್ರತಾ ದೃಷ್ಟಿಯಿಂದ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರ ರಜೆ ಘೋಷಿಸಲಾಗಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದು ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ರಂಜಿತ್ ಎಸ್ ತಿಳಿಸಿದ್ದಾರೆ.