ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಕವನವಾಚನ, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ
ನಾಡಪ್ರಭು ಕೆಂಪೇಗೌಡರ
ಜಯಂತಿ ಆಚರಣೆಯ ಅಂಗವಾಗಿ ತೀರ್ಥಹಳ್ಳಿ ತಾಲ್ಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಯ
ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ ಸಾಧನೆ ಕುರಿತು ವಿವಿಧ ಸ್ಪರ್ಧೆಗಳನ್ನು
ಏರ್ಪಡಿಸಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಪ್ರೌಢಶಾಲೆಯ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ 04 ಸ್ಪರ್ಧೆಗಳನ್ನು
ಏರ್ಪಡಿಲಾಗಿದೆ. ಅದರಲ್ಲಿ ಪ್ರಬಂಧ ಸ್ಪರ್ಧೆ, ಆಶುಭಾಷಣ, ಕವನವಾಚನ, ಮತ್ತು ಚಿತ್ರಕಲಾ ಸ್ಪರ್ದೆಗಳನ್ನು
ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಕಾಲೇಜು/ಶಾಲೆಯ ಪ್ರಾಂಶುಪಾಲರು,
ಉಪಪ್ರಾಂಶುಪಾಲರು ಮತ್ತು ಮುಖ್ಯ ಶಿಕ್ಷಕರುಗಳಲ್ಲಿ ಹೆಸರನ್ನು ನೊಂದಾಯಿಸಬೇಕು. ನೊಂದಾಯಿಸಿದ ವಿದ್ಯಾರ್ಥಿಗಳ
ಮಾಹಿತಿಯನ್ನು ಜುಲೈ 25ರ ಒಳಗೆ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವೈ ಗಣೇಶ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.
- ಚಿತ್ರಕಲೆ - ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಬಿಡುಸುವುದು
- ಕವನವಾಚನ - ಕೆಂಪೇಗೌಡರ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತು
- ಪ್ರಬಂಧ ಸ್ಪರ್ಧೆ – “ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ”
- ರಸಪ್ರಶ್ನೆ - ನಾಡಪ್ರಭು ಕೆಂಪೇಗೌಡರ ಬಗ್ಗೆ
