ವೈದ್ಯರ ವರ್ಗಾವಣೆ ವಿರೋಧಿಸಿ ಪ್ರತಿಭಟನೆ

ಸಮಾನ ಮನಸ್ಕ ವೇದಿಕೆಯಿಂದ ಪ್ರತಿಭಟನೆಗೆ ಕರೆ

ತೀರ್ಥಹಳ್ಳಿ ತಾಲ್ಲೂಕು ಜೆ.ಸಿ.ಆಸ್ಪತ್ರೆಯ 6 ವೈದ್ಯರನ್ನು ಒಮ್ಮೆಲೆ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ವಿರೋಧಿಸಿ ಗುರುವಾರ ಸಮಾನ ಮನಸ್ಕ ವೇದಿಕೆ ಪ್ರತಿಭಟನೆಗೆ ಕರೆ ನೀಡಿದೆ. ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆ ರಾಜ್ಯದ ಅತ್ಯುತ್ತಮ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಒಂದಾಗಿದ್ದು ವೈದ್ಯರುಗಳ ಉತ್ತಮ ಚಿಕಿತ್ಸೆ ಮತ್ತು ಸ್ವಚ್ಚತೆಗೂ ಹೆಸರುವಾಸಿಯಾಗಿದೆ. ಹಾಲಿ ವರ್ಗಾವಣೆಯಾಗಿರುವ ಎಲ್ಲಾ ವೈದ್ಯರು ಇಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ತಾಲ್ಲೂಕು ಮಾತ್ರವಲ್ಲದೇ ಅಕ್ಕ ಪಕ್ಕದ ತಾಲ್ಲೂಕುಗಳಿಂದಲೂ ರೋಗಿಗಳು ಇಲ್ಲಿಗೆ ಚಿಕಿತ್ಸೆ ಪಡೆಯಲು ಆಗಮಿಸುತ್ತಿದ್ದರು. ಹಾಗಾಗಿ ಇಲ್ಲಿಗೆ ನೂತನ ವೈದ್ಯರುಗಳ ನೇಮಕಾತಿಯ ಕುರಿತು ಯಾವುದೇ ಖಚಿತ ಭರವಸೆಯನ್ನು ಸರ್ಕಾರ ನೀಡದೆ ವರ್ಗಾವಣೆ ಮಾಡಿರುವುದು ಜನ ವಿರೋಧಿ ನಡೆಯೆಂದು ಸಮಾನ ಮನಸ್ಕ ವೇದಿಕೆ ಆರೋಪಿಸಿದೆ. ಇದನ್ನು ಪ್ರತಿಭಟಿಸುವ ಸಲುವಾಗಿ ಗುರುವಾರ 11 ಗಂಟೆಗೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಆಯೋಜಕರಲ್ಲಿ ಒಬ್ಬರಾಗಿರುವ ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಹಾಲಿ ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ ಮಾಹಿತಿ ನೀಡಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post