ಕುರುವಳ್ಳಿ ಆರ್ಯನ್ ಅನಿಲ್ ರಾಜ್ಯ ಮಟ್ಟಕ್ಕೆ

ಆಲ್ ರೌಂಡ್ ಆಟದಿಂದ ಮಿಂಚಿದ ಯುವ ಪ್ರತಿಭೆ

ತೀರ್ಥಹಳ್ಳಿ ತಾಲ್ಲೂಕಿನ ಕುರುವಳ್ಳಿಯ ಆರ್ಯನ್ ಅನಿಲ್ ಕೋಟಾದ ಅದಮಾರು ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ಇತ್ತೀಚಿಗೆ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಸಂಯುಕ್ತ ಕಾಲೇಜು ಒಕ್ಕೂಟದಡಿ ಜನತಾ ಪಿ ಯು ಕಾಲೇಜು ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ಆಲ್ ರೌಂಡ್ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆರ್ಯನ್ ಆಗುಂಬೆ ಎ.ವಿ.ಎಂ. ಶಾಲೆಯಲ್ಲಿ ಓದುವಾಗ ಕರ್ನಾಟಕವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ಮಿಂಚಿದ್ದರು. ಆರ್ಯನ್ ಕುಂದಾಪುರ ಎಕ್ಸ್ ಲೆಂಟ್ ಪಿಯು ಕಾಲೇಜು ವಿದ್ಯಾರ್ಥಿಯಾಗಿದ್ದು ಇವರು ಮೇಲಿನಕುರುವಳ್ಳಿಯ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಕುರುವಳ್ಳಿ ಅನಿಲ್ ಮತ್ತು ರಮ್ಯಾ ಅನಿಲ್ ಅವರ ಮಗ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post