ತೀರ್ಥಹಳ್ಳಿಗೆ ಬಿ.ವಿ.ಶ್ರೀನಿವಾಸ್ ಭೇಟಿ

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೇಯಸ್ ಆರೋಗ್ಯ ವಿಚಾರಿಸಿದ ಬಿ.ವಿ ಶ್ರೀನಿವಾಸ್
ತೀರ್ಥಹಳ್ಳಿ ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷರಾದ ಶ್ರೇಯಸ್ ರಾವ್ ಅವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಪಟ್ಟಣದ ಸೀಬಿನಕೆರೆಯ ಅವರ ನಿವಾಸಕ್ಕೆ ಮಾಜಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ, ತಾಲೂಕು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, ತೀರ್ಥಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ ಕೆಳಕೆರೆ, ಗ್ರಾಮೀಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಹೊಸಕೆರೆ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ್ ಶೆಟ್ಟಿ, ಯುವ ಕಾಂಗ್ರೆಸ್ ಪ್ರಮುಖರಾದ ಫಣಿರಾಜ್ ಕಟ್ಟೇಹಕ್ಕಲು, ಜಯಕರ ಶೆಟ್ಟಿ, ಆಸೀಫ್ ಸೀಬಿನಕೆರೆ, ಸುಭಾಷ್ ಕುಲಾಲ್, ಶೋಬಿತ್ ಬಾಳಗಾರು, ನದೀಮ್ ಬೆಟ್ಟಮಕ್ಕಿ, ರಾಘವೇಂದ್ರ ಸೀಬಿನಕೆರೆ, ಪ್ರಸನ್ನ, ಧ್ರುವಕುಮಾರ್, ಮಂಜು(ಗೂಗ್ಲಿ), ನಂದ ಹಾರೇಕೊಪ್ಪ ಸೇರಿದಂತೆ ಕುಟುಂಬಸ್ಥರು ಉಪಸ್ಥಿತರಿದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post