ಹಲುಸಾಲೆ ತಲುಪಿದ ಕಾಡಾನೆ

ಕೋಣಂದೂರು ಸಮೀಪ ಆನೆಗಳ ಓಡಾಟ
ಪಟಾಕಿ, ಬೆಂಕೆ, ಜನರ ಕೇಕೆಗೆ ಬೆದರಿದ ಆನೆಗಳು

ತೀರ್ಥಹಳ್ಳಿ ಪಟ್ಟಣಕ್ಕೆ ಆಗಮಿಸಿದ್ದ ಎರಡು ಕಾಡಾನೆಗಳು ಮಂಗಳವಾರ ರಾತ್ರಿ ಕೋಣದೂರು ಕಡೆಗೆ ಸಂಚರಿಸಿವೆ. ರಾತ್ರಿ ಕೌದಳ್ಳಿ ಮಾರ್ಗವಾಗಿ ಓಡಾಟ ನಡೆಸುವ ವೇಳೆ ಸ್ಥಳೀಯರು ಬೆಂಕಿ, ಪಟಾಕಿಗಳನ್ನು ವಿಪರೀತ ಪ್ರಮಾಣದಲ್ಲಿ ಬಳಕೆ ಮಾಡಿದ್ದರಿಂದ ಆರಗದ ಕಡೆಗೆ ಚಲಿಸಬೇಕಿದ್ದ ಆನೆಗಳು ಹೆದರಿ ದಿಕ್ಕಾಪಾಲಾಗಿ ಓಡಿವೆ ಎಂದು ತಿಳಿದು ಬಂದಿದೆ.

ಬುಧವಾರ ಕಂಬಳಿಗೆರೆ, ಮಲ್ಲಿಕಟ್ಟೆ ಭಾಗದಲ್ಲಿ ಓಡಾಟ ನಡೆಸಿ ಹಲುಸಾಲೆಯ ತೋಟಗಳನ್ನು ಹಾಳು ಮಾಡಿದೆ. ಉಡುಕೇರಿ, ಹಲುಸಾಲೆಯ ಕಾಡುಗಳಲ್ಲಿ ಆನೆ ಇದ್ದು ಸ್ಥಳೀಯರು ಓಟಾಡ ಮಾಡದಂತೆ ಎಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ. ರಾತ್ರಿ ಯಾವ ಕಡೆಗೆ ಆನೆಗಳು ಸೇರಲಿವೆ ಎಂಬ ಬಗ್ಗೆ ಸ್ಥಳೀಯವಾಗಿ ಹಲವು ಕುತೂಹಲಗಳು ಇದ್ದು ಅರಣ್ಯ ಇಲಾಖೆಗೂ ಇದು ತಲೆನೋವಾಗಿ ಪರಿಣಮಿಸಿದೆ.





ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post