ಲಯನ್ಸ್‌ ಕ್ಲಬ್‌, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವ

ಟೀಂ ಈಶ್ವರ ಮಲ್ಪೆ ಸಹಯೋಗ
ಉಚಿತ ಕಿವಿ ತಪಾಸಣೆ, ಶ್ರವಣ ಯಂತ್ರ ಸಹಾಯಧನ ವಿತರಣೆ ಸೆ.29ಕ್ಕೆ

ಸೆಪ್ಟೆಂಬರ್‌ 29ರ ಸೋಮವಾರ ತಾಲ್ಲೂಕಿನ ತುಂಗಾ ಸೇತುವೆ ಸಮೀಪದ ಲಯನ್ಸ್‌ ಭವನದಲ್ಲಿ ಲಯನ್ಸ್‌ ಕ್ಲಬ್‌, ತಾಲ್ಲೂಕು ಕಾರ್ಯನಿರತರ ಪತ್ರಕರ್ತರ ಸಂಘ ನೇತೃತ್ವದಲ್ಲಿ ಟೀಂ ಈಶ್ವರ್‌ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ವಿತರಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಶಿಬಿರ ಏರ್ಪಾಡಾಗಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್‌ ಕ್ಲಬ್‌ ಅಧ್ಯಕ್ಷ ಶ್ರೀಕಾಂತ್‌ ಭಟ್‌ ವಹಿಸಲಿದ್ದು ಅತಿಥಿಗಳಾಗಿ ಈಶ್ವರ್‌ ಮಲ್ಪೆ, ಶ್ರವಣ ತಜ್ಞ ಡಾ.ಪವನ್‌, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ್‌ ಮುನ್ನೂರು, ಲಯನ್ಸ್‌ ಕ್ಲಬ್‌ ಕಾರ್ಯದರ್ಶಿ ಲಿಂಗರಾಜು, ಶಿಬಿರದ ಸಂಚಾಲಕ ಲವ ಬಂಗೇರ, ಪತ್ರಕರ್ತರ ಸಂಘದ ಕಾರ್ಯದರ್ಶಿ ಕೋಣಂದೂರು ಮುರುಘರಾಜ್‌ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಭಾಗವಹಿಸುವವರು ಮೊಬೈಲ್‌ ಸಂಖ್ಯೆ 9901062533, 9902344399, 9901184244, 9481179490 ಸಂಪರ್ಕಿಸಬಹುದಾಗಿದೆ.




ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post