ತೀರ್ಥಹಳ್ಳಿ & ಕೋಣಂದೂರು - ಉಚಿತ ಕಿವಿ ತಪಾಸಣೆ ಶಿಬಿರ

ಶ್ರವಣ ಯಂತ್ರಕ್ಕೆ ಶೇಕಡಾ 40 ರಷ್ಟು ಸಹಾಯಧನ ವಿತರಣೆ

ಟೀಂ ಈಶ್ವರ ಮಲ್ಪೆ ಸಹಯೋಗದೊಂದಿಗೆ ಲಯನ್ಸ್‌ ಹಾಗೂ ರೋಟರಿ ಕ್ಲಬ್‌ ಮತ್ತು ತೀರ್ಥಹಳ್ಳಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೋಣಂದೂರು ಮತ್ತು ತೀರ್ಥಹಳ್ಳಿಯಲ್ಲಿ ಉಚಿತ ಕಿವಿ ತಪಾಸಣೆ ಶ್ರವಣ ಯಂತ್ರ ಸಹಾಯಧನ ಹಾಗೂ ವಿತರಣಾ ಕಾರ್ಯಕ್ರಮವನ್ನು ರೋಟರಿ ಕ್ಲಬ್‌ ವತಿಯಿಂದ ಸೆಪ್ಟೆಂಬರ್‌ 28ರ ಭಾನುವಾರ ಬೆಳಿಗ್ಗೆ ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯ ವರೆಗೆ ಕೋಣಂದೂರು ಸಮುದಾಯ ಆರೋಗ್ಯ ಕೇಂದ್ರ ಮತ್ತು ಲಯನ್ಸ್‌ ಕ್ಲಬ್‌ ವತಿಯಿಂದ ಸೆಪ್ಟೆಂಬರ್‌ 29ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ತೀರ್ಥಹಳ್ಳಿಯ ಮಾಧವ ಮಂಗಲ ಸಭಾ ಭವನದ ಹತ್ತಿರದ ಲಯನ್ಸ್‌ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಶಿಬಿರದಲ್ಲಿ ಕಿವಿ ಕೇಳಿಸದ ಸಮಸ್ಯೆ ಇರುವ ವ್ಯಕ್ತಿಗಳಿಗೆ ತಪಾಸಣೆ ಹಾಗೂ ಟೀಂ ಈಶ್ವರ್‌ ಮಲ್ಪೆ ವತಿಯಿಂದ ಅಗತ್ಯ ಇರುವವರಿಗೆ ಶ್ರವಣ ಯಂತ್ರಕ್ಕೆ ತಗಲುವ ವೆಚ್ಚದ ಶೇಕಡಾ 40 ರಷ್ಟು ಮೊತ್ತವನ್ನು ಭರಿಸಲಾಗುತ್ತದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಲು ವಿನಂತಿಸಲಾಗಿದೆ. ಮುಂಚಿತವಾಗಿ ನೊಂದಾಯಿಸುವುದು ಕಡ್ಡಾಯವಾಗಿದ್ದು ಶ್ರವಣ ಪರೀಕ್ಷೆಯ ಯಾವುದಾದರು ಹಳೆಯ ವರದಿಗಳು ಇದ್ದಲ್ಲಿ ತರಬಹುದಾಗಿದೆ. ಅಂತರಾಷ್ಟ್ರೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ನುರಿತ ವೈದ್ಯರು ಈ ಶಿಬಿರದಲ್ಲಿ ತಪಾಸಣೆ ನಡೆಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 8951804399 ಈ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post