ಕಾಡಾನೆ ಹಾವಳಿ ತಡೆಯುವಂತೆ ಒತ್ತಾಯ

ಅರಣ್ಯ ಇಲಾಖೆ ನಿರ್ಲಕ್ಷ್ಯ ಖಂಡನೀಯ
ಅರಣ್ಯ ಕಚೇರಿ ಮುಂಭಾಗ ಪ್ರತಿಭಟನೆಗೆ ಬೇಗುವಳ್ಳಿ ಕವಿರಾಜ್, ಮಧುರಾಜ್ ಹೆಗ್ಡೆ ಆಗ್ರಹ

ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಭಾಗದಲ್ಲಿ ಕಾಡಾನೆ ಲೂಟಿ ಮಾಡುತ್ತಿದ್ದು ತಕ್ಷಣ ಅರಣ್ಯ ಇಲಾಖೆ ಆನೆಯನ್ನು ಸ್ಥಳಾಂತರಕ್ಕೆ‌ ಮುಂದಾಗಬೇಕು. ನಿರ್ಲಕ್ಷ್ಯ ವಹಿಸಿದರೆ ಅರಣ್ಯ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ತಾಲ್ಲೂಕು ಬಿಜೆಪಿ ಉಪಾಧ್ಯಕ್ಷ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಬೇಗುವಳ್ಳಿ ಕವಿರಾಜ್, ಬಿಜೆಪಿ ಕಾರ್ಯದರ್ಶಿ, ತೂದೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ತೂದೂರು ಮಧುರಾಜ್ ಹೆಗ್ಡೆ ಆಗ್ರಹಿಸಿದ್ದಾರೆ.

ಬೇಗುವಳ್ಳಿ ಭಾಗದಲ್ಲಿ ಆನೆ ಕಾಣಿಸಿಕೊಂಡಿದ್ದರು ಇದುವರೆಗೂ ಅರಣ್ಯ ಇಲಾಖೆ ಆನೆ ಓಡಿಸುವ ಕಾರ್ಯಾಚರಣೆ ನಡೆಸುತ್ತಿಲ್ಲ. ನಿರ್ಲಕ್ಷ್ಯ ವಹಿಸಿದ್ದು ರೈತರ ಬೆಳೆ ನಷ್ಟವಾಗುತ್ತಿದೆ. ಈಗಾಗಲೇ ಅತೀವೃಷ್ಟಿಯಿಂದ ಇಳುವರಿಯಲ್ಲಿ ತೀವ್ರ ಇಳಿಮುಖವಾಗಿದ್ದು ಬೆಳೆ ಉಳಿಸಿಕೊಳ್ಳುವ ದೊಡ್ಡ ಸವಾಲು ಇದೆ. ಈ ನಡುವೆ ಕಾಡು ಪ್ರಾಣಿಗಳು ದಿನೆ ದಿನೆ ಹಾವಳಿ ನಡೆಸಿ ರೈತರ ಗದ್ದೆ, ತೋಟಗಳಿಗೆ ಹಾನಿ ಮಾಡುತ್ತಿದೆ. ಫಸಲು ಇನ್ನೇನು ಕೈ ಸೇರುತ್ತದೆ ಎಂಬ ಹೊತ್ತಿನಲ್ಲಿ ಇಂತಹ ಪ್ರಾಣಿಗಳ ಲೂಟಿ ರೈತಾಪಿ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ‌. ತಕ್ಷಣ ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು. ಆನೆಯನ್ನು ಸೆರೆ ಹಿಡಿದು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಬೇಗುವಳ್ಳಿ ಕವಿರಾಜ್, ತೂದೂರು ಮಧುರಾಜ್ ಹೆಗ್ಡೆ ಒತ್ತಾಯಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post