ಮಾಳೂರಿನಲ್ಲಿ ತಾಲ್ಲೂಕು ಮಟ್ಟದ ಹೈಸ್ಕೂಲ್‌ ಕ್ರೀಡಾಕೂಟ

ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರಗ ಜ್ಞಾನೇಂದ್ರ
ಅಂದಾಜು 6 ಲಕ್ಷ ವೆಚ್ಚದ ಕ್ರೀಡಾಕೂಟದ ಮುಂದಾಳತ್ವ ವಹಿಸಿದ ಸ್ಥಳೀಯರು

ತೀರ್ಥಹಳ್ಳಿ ತಾಲೂಕ ಮಟ್ಟದ 17 ವರ್ಷ ವಯೋಮಿತಿ ಒಳಗಿನ ಬಾಲಕ, ಬಾಲಕಿಯರ ಅಥ್ಲೆಟಿಕ್ಟಿ ಕ್ರೀಡಾಕೂಟ ಮಾಳೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರಿಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಆರಗ ಜ್ನಾನೇಂದ್ರ ರಾಜಕಾರಣದಲ್ಲಿ ಸೋಲನ್ನು ಕ್ರೀಡಾಸ್ಪೂರ್ತಿಯಿಂದ ಎದುರಿಸಬೇಕೆಂದು ಹೇಳುತ್ತಾರೆ. ಇದರರ್ಥ ಸೋಲು ಗೆಲುವಿನ ಸೋಪಾನ ಎಂದು ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲು ಆಗುವುದಿಲ್ಲ. ಗೆಲ್ಲಲು ನಿರಂತರ ಪರಿಶ್ರಮ, ತಾಳ್ಮೆ ಅಗತ್ಯ ಆದರೆ ಕ್ರೀಡೆಯಲ್ಲಿ ರಾಜಕಾರಣ ಸಲ್ಲದು ಎಂದರು.

ಪ್ರಾಸ್ತವಿಕವಾಗಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಶೋಕಮೂರ್ತಿ ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಯನ್ನು ಜನ ಸಂಭ್ರಮಿಸುತ್ತಾರೆ ಎನ್ನುವುದಕ್ಕೆ ಮಾಳೂರಿನಲ್ಲಿ ಆಯೋಜನೆಗೊಂಡಿರುವ ಕ್ರೀಡಾಕೂಟ ಸಾಕ್ಷಿ. ಬಹುತೇಕ ಸ್ಥಳೀಯ ದಾನಿಗಳು ಇಡೀ ಕ್ರೀಡಾಕೂಟವನ್ನು ಪ್ರಾಯೋಜಿಸಿದ್ದಾರೆ. ಇಂತಹ ವಾತಾವರಣ ಎಲ್ಲ ಕಡೆ ನಿರ್ಮಾಣವಾಗಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೆಜ್ಜವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ್, ಉಪಾಧ್ಯಕ್ಷ ಸುಬ್ರಮಣ್ಯ ಶೆಟ್ಟಿ, ಸದಸ್ಯ ಹರೀಶ್ ಮೇಲಿನಕೊಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್, ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಗಿರಿರಾಜ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಮು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗೋಪಾಲ, ಪ್ರಾಂಶುಪಾಲ ಶಿವಕುಮರ್, ಸ್ವಾಗತ ಸಮಿತಿ ಉಪಾಧ್ಯಕ್ಷ ಶ್ರೀನಾಥ್ ಮುಂತಾದವರು ಉಪಸ್ಥಿತರಿದ್ದರು

ಹಿರಿಯ ಸಹ ಶಿಕ್ಷಕಿ ನಿಶಾ ಕಾನೇಟಕರ ಸ್ವಾಗತಿಸಿದರು. 48 ಶಾಲೆಗಳ ಬಾಲಕ, ಬಾಲಕಿಯರು ಕ್ರಿಡಾಕೂಟದಲ್ಲಿ ಸ್ಪರ್ಧಿಸಿದ್ದಾರೆ

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post