ರಾಷ್ಟ್ರೀಯ ವಸತಿ ಶಾಲೆಗೆ ಡೈನಾಮಿಕ್ ಶಾಲೆ ಪ್ರಶಸ್ತಿ

ಕೋಣಂದೂರಿನ ಕೇಂದ್ರೀಯ ಪಠ್ಯಕ್ರಮದ ರಾಷ್ಟ್ರೀಯ ವಸತಿ ಶಾಲೆಗೆ 2025-26ನೇ ಸಾಲಿನ ಎಜುಕೇಷನ್ ನ್ಯೂಸ್ ನೆಟ್ ವರ್ಕ್ ವತಿಯಿಂದ ನೀಡುವ ‘ಡೈನಾಮಿಕ್ ಸ್ಕೂಲ್’ ಪ್ರಶಸ್ತಿ ಲಭಿಸಿದೆ.

ಇತ್ತೀಚೆಗೆ ಮೈಸೂರಿನ ರಾಡಿಸನ್ ಬ್ಲೂ ಪ್ಲಾಜಾ ಹೋಟೆಲಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಾಂಶುಪಾಲ ಕೆ.ಎಸ್.ವಾಸುದೇವ ಪ್ರಶಸ್ತಿ ಸ್ವೀಕರಿಸಿದರು. ಅಕಾಡೆಮಿಕಾ ಇಂಟರ್ ನ್ಯಾಷನಲ್ ಸ್ಟಡೀಸ್ ನಿರ್ದೇಶಕ ಡಾ.ಸುರೇನ್ ರಾಮ ಸುಬ್ಬು, ಅಡ್ರೆಸ್ ಹೆಲ್ತ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಆನಂದ ಲಕ್ಷ್ಮಣ್ ಇದ್ದರು.ಹಿಂದೆ 2014ರಲ್ಲಿ ಬ್ರಿಟೀಷ್ ಕೌನ್ಸಿಲ್ ಪ್ರಶಸ್ತಿ ಲಭಿಸಿರುವುದನ್ನು ಸ್ಮರಿಸಬಹುದು. ಗ್ರಾಮಾಂತರ ಪ್ರದೇಶದಲ್ಲಿ ಕೇಂದ್ರೀಯ ಪಠ್ಯಕ್ರಮದ ಗುಣಾತ್ಮಕ ಶಿಕ್ಷಣ, ಕ್ರೀಡಾ ಕ್ಷೇತ್ರ, ಪಠ್ಯೇತರ ಚಟುವಟಿಕೆಗಳಲ್ಲಿ ಶಾಲೆ ಈಚೆಗೆ ಮಾಡಿದ ಸಾಧನೆಗಳನ್ನು ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.ಬೆಳ್ಳಿ ಹಬ್ಬದ ಹೊಸ್ತಿಲಲ್ಲಿರುವ ರಾಷ್ಟ್ರೀಯ ವಸತಿ ಶಾಲೆಗೆ  ಸತತ 2ನೇ ಬಾರಿ  ಪ್ರಶಸ್ತಿ ಲಭಿಸಲು ಸಹಕರಿಸಿದ ಆಡಳಿತ ಮಂಡಳಿ, ಅಧ್ಯಾಪಕ ವೃಂದ, ಸಿಬ್ಬಂದಿ, ಪೋಷಕರನ್ನು ಪ್ರಾಂಶುಪಾಲ ಕೆ.ಎಸ್.ವಾಸುದೇವ ಅಭಿನಂದಿಸಿದ್ದಾರೆ. 

ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿ ಜಿ.ಎಸ್.ನಾರಾಯಣರಾವ್‌ ಕಾರ್ಯ ನಿರ್ವಹಿಸುತ್ತಿರುವ ಹೊತ್ತಿನಲ್ಲಿ ಈ ಮಹತ್ವದ ಪ್ರಶಸ್ತಿ ಲಭಿಸಿರುವುದು ಗಮನಾರ್ಹವಾಗಿದೆ.




ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post