ಆಗುಂಬೆ ಕಾಡಾನೆ ತುಳಿದು ಇಬ್ಬರ ದುರ್ಮರಣ?

ಶೃಂಗೇರಿ ತಾಲ್ಲೂಕಿನ ಕೆರೆಕಟ್ಟೆ ಸಮೀಪ ಘಟನೆ
Nelada Dwani Exclusive news

ಚಿಕ್ಕಮಗಳೂರು ಜಿಲ್ಲೆಯ ಶಂಗೇರಿ ತಾಲ್ಲೂಕಿನ ಕೆರೆಕಟ್ಟೆ ಸಮೀಪ ಕಾಡಾನೆ ತುಳಿದು ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ.
ಮೃತರನ್ನು ಹರೀಶ್ ಮತ್ತು ಉಮೇಶ್ ಸಹೋದರರು ಎಂದು ಗುರುತಿಸಲಾಗಿದ್ದು ಮೃತರ ಬಗ್ಗೆ ಇನ್ನಷ್ಟು ಮಾಹಿತಿಗಳು ಹೊರ ಬೀಳಬೇಕಿದೆ. ಆಗುಂಬೆ ಭಾಗದಲ್ಲಿ ಸಂಚರಿಸುತ್ತಿದ್ದ ಕಾಡಾನೆ ಎಂಬ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು ಆನೆಯ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ. ಕಾಡಾನೆ ತುಳಿದು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಆದರೆ ಶೃಂಗೇರಿ ಭಾಗದಿಂದ ಬೇರೆ ಆನೆಯೊಂದು ಬಂದಿದೆಯೋ‌ ಅಥವಾ ಆಗುಂಬೆಯಲ್ಲಿ ಮೂರು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಒಂಟಿ ಆನೆಯೆ ಕೆರೆಕಟ್ಟೆ ಮಾರ್ಗದಲ್ಲಿ ಹಿಂದಿರುಗಿದೆಯಾ ಎಂಬ ಬಗ್ಗೆ ಖಚಿತ ಮಾಹಿತಿಗಳು ಹೊರಬೀಳಬೇಕಿದೆ. ಸುಮಾರು  15 ವರ್ಷಗಳಿಗೂ ಹೆಚ್ಚುಕಾಲ ಆಗುಂಬೆಯಲ್ಲಿ ಸಂಚರಿಸುತ್ತಿದ್ದ ಕಾಡಾನೆ ಆಗಿದ್ದರೆ ಇದು ಹಲವು ವರ್ಷಗಳ ನಂತರ ನಡೆದ ಕಾಲ್ತುಳಿತ ಆಗಿ ಕಾಣಿಸಿಕೊಳ್ಳಲಿದೆ. ಮಲ್ಲಂದೂರಿನಲ್ಲಿ ಹಿಂದೊಮ್ಮೆ ನಡೆದಿದೆ ಎನ್ನಲಾದ ಕಾಡಾನೆ ತುಳಿತದ ಬಳಿಕ ಇಂತಹ ವರದಿಗಳು ಬಂದಿರಲಿಲ್ಲ. ಇದೀಗ ಕೆರೆಕಟ್ಟೆ ಸಮೀಪ ಸಂಭವಿಸಿದ್ದು ಎರಡನೆಯ ಘಟನೆಯಾಗಿ‌ ಕಾಣಿಸಿಕೊಳ್ಳಲಿದೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ದೌಡಾಯಿಸಿದ್ದು ಘಟನೆಯ ಕುರಿತು ಅರಣ್ಯ ಇಲಾಖೆಯಿಂದ ಖಚಿತ ಮಾಹಿತಿ ಹೊರ ಬೀಳಬೇಕಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post