ಹಿರಿಯ ರಾಜಕಾರಣಿ ಡಿ.ಲಕ್ಷ್ಮಣ್‌ ಇನ್ನಿಲ್ಲ

ತೀರ್ಥಹಳ್ಳಿ ಕ್ಷೇತ್ರದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮುಂಡಿಗೆಮನೆ ಡಿ.ಲಕ್ಷ್ಮಣ್‌ (72) ದೀರ್ಘಕಾಲದ ಅನಾರೋಗ್ಯದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡು 90ರ ದಶಕದಲ್ಲಿ ತೀರ್ಥಹಳ್ಳಿಯ ಪ್ರಭಾವಿ ಈಡಿಗ ಸಮಾಜದ ಮುಖಂಡ ಮತ್ತು ರಾಜಕಾರಣಿ ಆಗಿಯೂ ಮುನ್ನೆಲೆಗೆ ಬಂದಿದ್ದರು. ಬಂಗಾರಪ್ಪನವರು ಕರ್ನಾಟಕ ಕಾಂಗ್ರೆಸ್‌ ಪಕ್ಷ ಕಟ್ಟಿದ್ದಾಗ ಅದರ ಅಭ್ಯರ್ಥಿಯಾಗಿ ತೀರ್ಥಹಳ್ಳಿಯಲ್ಲಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ಅಲ್ಲದೇ ತೀರ್ಥಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ, ಮೇಗರವಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ಬಿಜೆಪಿ ಪಕ್ಷಕ್ಕೆ ವಲಸೆ ಹೋಗಿ ಬಳಿಕ ಇತ್ತೀಚೆಗೆ ಮತ್ತೆ ಕಾಂಗ್ರೆಸ್‌ಗೆ ವಾಪಾಸ್ಸು ಬಂದಿದ್ದರು. ಅವರ ನಿಧನಕ್ಕೆ ಹಲವಾರು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಅವರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥವ ಶರೀರ ತೀರ್ಥಹಳ್ಳಿಯ ಬೆಟ್ಟಮಕ್ಕಿ ಅವರ ಸ್ವಗೃಹದಲ್ಲಿ ದರ್ಶನಕ್ಕೆ ಇಡಲಾಗಿದೆ. ಅಂತ್ಯಸಂಸ್ಕಾರ ನಾಳೆ ಬೆಳಗ್ಗೆ 8.00 ಗಂಟೆಗೆ ( ಭಾನುವಾರ ) ಸ್ವಂತ ಊರು ಮುಂಡಿಗೆಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲದಿಂದ ತಿಳಿದು ಬಂದಿದೆ...

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post