ಲಯನ್ಸ್‌ ವತಿಯಿಂದ ಗಾಂಧಿ ಜಯಂತಿ ಆಚರಣೆ

ಅಕ್ಟೋಬರ್ 2 ಗಾಂಧಿ ಜಯಂತಿ ದಿನದಂದು ಲಯನ್ಸ್ ಕ್ಲಬ್ ತೀರ್ಥಹಳ್ಳಿ ವತಿಯಿಂದ ಲಯನ್ಸ್ ಭವನದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಭಟ್ ಅಧ್ಯಕ್ಷತೆ ವಹಿಸಿಕೊಂಡು ಸರ್ವರನ್ನು ಸ್ವಾಗತಿಸಿ ಮಾತನಾಡುತ್ತಾ ವಿಶ್ವಸಂಸ್ಥೆ ಮಹಾತ್ಮ ಗಾಂಧೀಜಿಯವರಿಗೆ ಸಿಕ್ಕ ಗೌರವ ಮತ್ತು ಅವರ ತತ್ವ ಸಿದ್ಧಾಂತಗಳನ್ನು ಪ್ರಪಂಚದ ಬೇರೆ ಬೇರೆ ದೇಶಗಳಿಗೆ ಅಗತ್ಯವಿರುವ ಬಗ್ಗೆ ವಿಶ್ವಸಂಸ್ಥೆ ತೆಗೆದುಕೊಂಡ ನಿರ್ಣಯವನ್ನು ಪ್ರಸ್ತಾಪಿಸಿದರು. ಹಾಗೆಯೇ ಪ್ರಧಾನಿಯಾದಾಗ ಲಾಲ್ ಬಹದ್ದೂರ್ ಶಾಸ್ತ್ರಿಯವರು ಜೈ ಜವಾನ್ ಜೈ ಕಿಸಾನ್ ಘೋಷಣೆಯೊಂದಿಗೆ ಕಾರ್ಮಿಕರಿಗೆ ಮತ್ತೆ ರೈತರಿಗೆ ಸಿಕ್ಕ ಗೌರವದ ಬಗ್ಗೆ ಮಾತನಾಡಿದರು, ಕೊನೆಯಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಿಂಗರಾಜ್ ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ವಂದನೆಗಳನ್ನು ಸಲ್ಲಿಸಿದರು. ನಂತರ ಸಿಹಿ ವಿತರಣೆ ಮಾಡಲಾಯಿತು.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post