ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್‌ ಇಂಜಿನಿಯರ್ಸ್

ಅಧ್ಯಕ್ಷರಾಗಿ ಹಾರೋಗೊಳಿಗೆ ಸವೀನ್ ಆಯ್ಕೆ
ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ సివిಲ್ ಎಂಜಿನಿಯರ್ಸ್ ಬೆಂಗಳೂರು ಕೇಂದ್ರದ ಅಧ್ಯಕ್ಷರಾಗಿ ಹಾರೋಗೊಳಿಗೆ ಸವೀನ್ ಆಯ್ಕೆಯಾಗಿದ್ದಾರೆ.

ಸುಮಾರು 40 ವರ್ಷಗಳ ಹಿನ್ನೆಲೆ ಹೊಂದಿರುವ ಅಸೋಸಿಯೇಷನ್‌ಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ತೀರ್ಥಹಳ್ಳಿ ಮೂಲದ ಇಂಜಿನಿಯರ್ ಸವೀನ  ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಾರ್ಯದರ್ಶಿಯಾಗಿ ಅನಿರುದ್ ಎಸ್.ಬಿ. ಖಜಾಂಚಿಯಾಗಿ ಆ‌ರ್.ವೆಂಕಟೇಶ್ ಬಾಬು ಆಯ್ಕೆಯಾಗಿದ್ದಾರೆ.

1985 ರಲ್ಲಿ ಆರಂಭವಾದ ಅಸೋಸಿಯೇಶನ್ಸ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಸಂಸ್ಥೆಯು ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ಇದು ದೇಶಾದ್ಯಂತ ಸುಮಾರು 51 ಕೇಂದ್ರಗಳನ್ನು ಹೊಂದಿದೆ. ಇದು ಭಾರತದಲ್ಲಿ ಅಸ್ತಿತ್ವದಲ್ಲಿರುವ ಸಿವಿಲ್ ಇಂಜಿನಿಯರ್ ಗಳ ಅತಿ ದೊಡ್ಡ ವೃತ್ತಿಪರ ಸಂಸ್ಥೆ ಎಂಬ ಹೆಗಳಿಕೆಯನ್ನೂ ಹೊಂದಿದೆ. ಈ ಸಂಸ್ಥೆಯ ನೇತೃತ್ವವನ್ನು ಈಗ ಸವೀನ್ ವಹಿಸಿಕೊಳ್ಳುತ್ತಿದ್ದಾರೆ.

ಮೂಲತಃ ತೀರ್ಥಹಳ್ಳಿ ತಾಲ್ಲೂಕಿನ ಸವೀನ್ ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಮುಗಿಸಿ ಸುಮಾರು 17 ವರ್ಷ ವಿವಿಧ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಕಳೆದ 5 ವರ್ಷಗಳಿಂದ ಬೆಂಗಳೂರಿನಲ್ಲಿ ತಮ್ಮದೇ ಸ್ವಂತ ಸಂಸ್ಥೆ ಕಟ್ಟಿ ಕಟ್ಟಡ ನಿರ್ಮಾಣ/ ತಾಂತ್ರಿಕ ಸಲಹೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಂಗಳೂರು ಕೇಂದ್ರಕ್ಕೀಗ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿದ್ದು ವೃತ್ತಿಪರ ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ. ಕೃಷಿ, ಸಾಹಿತ್ಯ, ಸಿನಿಮಾ ಕ್ಷೇತ್ರಗಳಲ್ಲಿ ವಿಶೇಷ ಆಸಕ್ತಿ ಹೊಂದಿರುವ ಅವರು, ಹಲವು ಎನ್‌ಜಿಒಗಳು ಹಾಗೂ ಸಾಮಾಜಿಕ ಸಂಘಟನೆಗಳಲ್ಲಿಯೂ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post