ಹೊಸಹಳ್ಳಿ ಮಂಜಪ್ಪ ಶಾಮಯ್ಯ ಗೌಡ ನಿಧನ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀಗರು
ತೂದೂರು ಸೇತುವೆ ನಿರ್ಮಾಣದ ಕಾರಣೀಕರ್ತ
ಸ್ನೇಹಜೀವಿ, ಬಡವರ ಬಗ್ಗೆ ಅತೀವ ಕಾಳಜಿ ಹೊಂದಿದ್ದ ಹೊಸಹಳ್ಳಿ ಮಂಜಪ್ಪ ಶಾಮಯ್ಯ ಗೌಡ (96) ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಹೆದ್ದೂರಿನ‌ ಹೊಸಹಳ್ಳಿ ಮೂಲದವರಾಗಿದ್ದ ಅವರು ಬಹಳ ವರ್ಷಗಳ ಹಿಂದೆಯೇ ತೂದೂರಿಗೆ ಬಂದು ನೆಲೆ ನಿಂತಿದ್ದರು. 

ಈಗಿರುವ ಮುಡುಬ ಸೇತುವೆಯನ್ನು ತಮ್ಮ ಪ್ರಭಾವ ಬಳಸಿ ತೂದೂರಿಗೆ ತರುವ ಪ್ರಯತ್ನವನ್ನು ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಕಡಿದಾಳು ಮಂಜಪ್ಪ ಕಾರಣದಿಂದ ಅಂದು ತೂದೂರಿಗೆ ಸೇತುವೆ ಸಿಗದೆ ಹೋಗಿತ್ತು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೀಗರಾಗಿದ್ದ ಅವರು 2022ರಲ್ಲಿ ತೂದೂರಿಗೆ ಸೇತುವೆ ಕೊಡುವಂತೆ ಮನವಿ ಮಾಡಿಕೊಂಡಿದ್ದರು. ಅದರ ಪ್ರಯತ್ನದ ಫಲವಾಗಿ ಬಸವರಾಜ ಬೊಮ್ಮಾಯಿ ತೂದೂರಿಗೆ ಸೇತುವೆ ಮಂಜೂರು ಮಾಡಿಸಿದ್ದಾರೆ.

ಅವರಿಗೆ ಆರು ಹೆಣ್ಣು ಮಕ್ಕಳು ಇದ್ದಾರೆ. ಅಂತ್ಯಕ್ರಿಯೆ ಸೋಮವಾರ ತೂದೂರಿನಲ್ಲಿ ನಡೆಯಲಿದೆ. 
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post