ಬೆಜ್ಜವಳ್ಳಿ‌ ಸಮೀಪ ಕಾಡಾನೆ ಪ್ರತ್ಯಕ್ಷ

ಸ್ಥಳೀಯರು, ಅರಣ್ಯ ಸಿಬ್ಬಂದಿಯಿಂದ ಆನೆ ಕಾವಲು
ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಯದವಳ್ಳಿ ಗ್ರಾಮದ ತಾಟಳ್ಳಿ ಎಂಬಲ್ಲಿ ಗುರುವಾರ ಬೆಳಗ್ಗಿನ ಜಾವ ಕಾಡಾನೆ ಕಾಣಿಸಿಕೊಂಡಿದೆ. ಗುತ್ತಿಎಡೇಹಳ್ಳಿ, ಸರುವಿನಗದ್ದೆ, ಕಾವೇರಿ ಗ್ರಾಮಗಳಲ್ಲಿ ಸಂಚರಿಸಿರುವ ಆನೆ ತಾಟಳ್ಳಿಯಲ್ಲಿದೆ.  ಕಾಡಾನೆ ಯಾವ ದಿಕ್ಕಿನ ಕಡೆ ಚಲಿಸಲಿದೆ ಎಂಬ ಬಗ್ಗೆ ಗೊಂದಲಗಳಿವೆ. ಗುರುವಾರ ಅಲ್ಲಿಯೇ ವಿಶ್ರಾಂತಿ ಪಡೆದರೆ ಶುಕ್ರವಾರ ರಾತ್ರಿ ಸಂಚಾರ ನಡೆಯಲಿದೆ. ಕಾಡಾನೆ ಕಾವಲಿಗಾಗಿ ಸ್ಥಳೀಯರು ಗ್ರಾಮದಲ್ಲಿ ಜಮಾಯಿಸಿದ್ದು ಅವರೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಯನ್ನು ಹಿಂದಕ್ಕೆ ಕಳುಹಿಸಲು ಸಿದ್ದತೆ ನಡೆಸುತ್ತಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post