ಕೊಡಚಾದ್ರಿ ಟ್ರಸ್ಟ್‌ ಮೂಲಕ ಉತ್ಪನ್ನ ಮೌಲ್ಯವರ್ಧನೆ

23 ವರ್ಷಗಳಿಂದ ಟ್ರಸ್ಟ್‌ ವತಿಯಿಂದ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರೋತ್ಸಾಹ

ನವೆಂಬರ್‌ 11 ರಂದು ಕೋಣಂದೂರಿನಲ್ಲಿ ಪಟ್ಲ ಸತೀಶ್‌ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ

ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಕೃಷಿಕರಿಗೆ ಉಪಕಸುಬುಗಳ ತರಬೇತಿ ನೀಡಿ ಅವರು ಸಿದ್ದಪಡಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿ ಕೃಷಿಕರನ್ನು ಸ್ವಾವಲಂಬಿಗಳನ್ನಾಗಿಸು ಪ್ರಯತ್ನವನ್ನು ಮಾಡುತ್ತಿದೆ ಎಂದು ಟ್ರಸ್ಟ್  ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಚಾದ್ರಿ ಉತ್ಸವ ನಡೆಸುವ ಮೂಲಕ ಮೌಲ್ಯವರ್ದನೆಗೆ ಚಾಲನೆ ನೀಡಲಾಗಿದೆ. ಜಿಲ್ಲೆಯಲ್ಲಿನ ವಿವಿಧ ಮಹಿಳಾ ಸಹಕಾರ ಸಂಘಗಳನ್ನು ಡಿಸಿಸಿ ಬ್ಯಾಂಕಿನೊಂದಿಗೆ ಜೋಡಿಸುವ ಪ್ರಯತ್ನ ಮಾಡಿದ್ದು ಇದುವರೆಗೆ ಜಿಲ್ಲೆಯಲ್ಲಿನ 12,600 ಸಂಘಗಳನ್ನು ಲಿಂಕ್ ಮಾಡಿ ತರಬೇತಿ ನೀಡಲಾಗುತ್ತಿದೆ.ಹಪ್ಪಳ, ಉಪ್ಪಿನಕಾಯಿ, ಹೈನುಗಾರಿಕೆ, ಟೈಲರಿಂಗ್ ಸೇರಿದಂತೆ ಅನೇಕಬಗೆಯ ಕರಕುಷಲ ಉತ್ಪನ್ನಗಳ ಕುರಿತು ತರಬೇತಿ ನೀಡಲಾಗುತ್ತಿದೆ ಎಂದರು.

 ಟ್ರಸ್ಟ್ 2006 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಕಲೆ, ಸಾಹಿತ್ಯ ಕ್ಷೇತ್ರಕ್ಕೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಜಿಲ್ಲೆಯ ಪ್ರತಿಭೆಗಳನ್ನು ಗೌರವಿಸುವ ಕೆಲಸ ಮಾಡುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಯಕ್ಷಧೃವ ಶ್ರೀ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ನಾಡಿನ ಸುಪ್ರಸಿದ್ಧ ಯಕ್ಷಗಾನ ಮಂಡಳಿಯಾದ ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ  “ಸಂಪೂರ್ಣ ದೇವಿ ಮಹಾತ್ಮೆ” ಎಂಬ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದರು.

ನವೆಂಬರ್ 11 ರಂದು ಹೋಬಳಿ ಕೇಂದ್ರವಾದ ಕೋಣಂದೂರಿನ ಎನ್.ಇ.ಎಸ್. ಶಾಲಾ ಆಟದ ಮೈದಾನದಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 11ರ ವರೆಗೆ ನಡೆಯಲಿದ್ದು ಪ್ರದರ್ಶನಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌, ಶಿಮುಲ್‌ ಅಧ್ಯಕ್ಷ ವಿದ್ಯಾಧರ್‌, ಸಾಂಸ್ಕೃತಿಕ ಸಮಿತಿ ಸಂಚಾಲಕ ಮಧುಸೂದನ್‌ ನಾವುಡ, ಪ್ರಮುಖರಾದ ಟಿ.ಎಲ್.ಸುಂದರೇಶ್‌, ಎಚ್.ವಿ.ಅಜಿತ್‌, ಕಂಪದಗದ್ದೆ ಸುರೇಶ್‌, ಟಿ.ಎಲ್.ಸುಂದರೇಶ್‌, ಕೊಲ್ಲೂರಯ್ಯ, ಕೋಣಂದೂರು ಲಕ್ಷ್ಮಣ್‌, ಬಿ.ಆರ್.ರಾಘವೇಂದ್ರ ಶೆಟ್ಟಿ, ರತ್ನಾಕರ ಶೆಟ್ಟಿ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post