2026ರ ಜನವರಿ 4ರಂದು ಕ್ರೀಡಾಕೂಟ
ಕಾರ್ಯಕಾರಿ ಮಂಡಳಿಯಲ್ಲಿ ಅವಿರೋಧ ಆಯ್ಕೆ
ಬೆಂಗಳೂರಿನಲ್ಲಿ ನೆಲೆಸಿರುವ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡಿನ ಸಮುದಾಯವನ್ನು ಪ್ರತಿನಿಧಿಸುವ ಪ್ರಮುಖ ಸಂಘಟನೆಯಾದ ಮಲೆನಾಡು ಮಿತ್ರ ವೃಂದದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸಂಘದ ನಿರ್ದೇಶಕರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಸಂಘದ ಅಧ್ಯಕ್ಷರಾದ ಪ್ರದೀಪ್ ಹೆಗ್ಗೋಡು ಕಾರ್ಯಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಂಘದ ಮುಂದಿನ ಎರಡು ವರ್ಷಗಳ ಅವಧಿಗಾಗಿ ಈ ಹೊಸ ಕಾರ್ಯಕಾರಿಣಿ ಮಂಡಳಿಯನ್ನು ಅಧಿಕೃತವಾಗಿ ರಚಿಸಲಾಗಿದೆ.
ಅಧ್ಯಕ್ಷರಾಗಿ ಸಂದೇಶ್ ಗೌಡ ಹಂದಿಗೂಡು, ಉಪಾಧ್ಯಕ್ಷರಾಗಿ ಉಮೇಶ್ ಇಳಿಮನೆ ಕಾರ್ಯದರ್ಶಿಯಾಗಿ ನಾಗೇಶ್ ಕೇಳೂರು, ಸಹ ಕಾರ್ಯದರ್ಶಿಯಾಗಿ ರಾಘವೇಂದ್ರ ಸಿಸ್ಲೆ, ಖಜಾಂಚಿಯಾಗಿ ನಿದರ್ಶನ ಗಾಡಿಗೆರೆ,
ಸಂಘಟನಾ ಕಾರ್ಯದರ್ಶಿಗಳಾಗಿ ದಿನೇಶ್ ಹೊಸನಗರ, ರವೀಶ್ ಕೆ ಪಿ, ನಿಶ್ಚಿತ್ ಜಾವಗಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂದೇಶ್ ಗೌಡ ಹಂದಿಗೂಡು ಮಾತನಾಡಿ, "ಮಲೆನಾಡು ಮಿತ್ರ ವೃಂದದ ಮುಖ್ಯ ಧ್ಯೇಯವಾದ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸುವುದರ ಜೊತೆಗೆ, ಬೆಂಗಳೂರಿನಲ್ಲಿರುವ ಮಲೆನಾಡಿಗರ ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಸಬಲೀಕರಣಕ್ಕಾಗಿ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಎಲ್ಲಾ ಸದಸ್ಯರು, ಹಿರಿಯ ಗೌರವಾನ್ವಿತ ನಿರ್ದೇಶಕರು ಮತ್ತು ಪದಾಧಿಕಾರಿಗಳ ಸಹಕಾರದೊಂದಿಗೆ ಸಂಘವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.
ನೂತನ ಕಾರ್ಯಕಾರಿಣಿ ಮಂಡಳಿಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾರ್ಯನಿರ್ವಹಿಸಲಿದ್ದು 2026 ರಂದು ನಡೆಯಲಿರುವ ವಾರ್ಷಿಕ ಕ್ರೀಡಾಕೂಟ ಸೇರಿದಂತೆ ಇತರೆ ಕಾರ್ಯಕ್ರಮಗಳ ಕುರಿತು ಹೆಚ್ಚಿನ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.