ಬಿಜೆಪಿ ಯುವ ಮುಖಂಡ ಕಾಂಗ್ರೆಸ್ ಸೇರ್ಪಡೆ

ಕಾಂಗ್ರೆಸ್ ಬಾವುಟ ಹಿಡಿದ ಮೇಲಿನಕುರುವಳ್ಳಿ ದೇವರಾಜ್ ಎಸ್
ಪಕ್ಷಕ್ಕೆ ಬರ ಮಾಡಿಕೊಂಡ ಸಚಿವ ಮಧುಬಂಗಾರಪ್ಪ
ದೇವರಾಜ್ ಎಂದರೆ ವ್ಯಕ್ತಿಯಲ್ಲ ಶಕ್ತಿ
ಮೇಲಿನಕುರುವಳ್ಳಿಯ ಬಿಜೆಪಿ ಸಂಘಟಕನಾಗಿ ಗುರುತಿಸಿಕೊಂಡಿದ್ದ ಐಪಿಎಸ್ ದೇವರಾಜ್ ಎಂದೇ ಸ್ನೇಹಿತರ ವಲಯದಲ್ಲಿ ಪ್ರಸಿದ್ಧರಾಗಿರುವ ಯುವ ಮುಖಂಡ ದೇವರಾಜ್ ಎಸ್. ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ಅಧಿಕೃತವಾಗಿ ಸೇರ್ಪಡೆಗೊಂಡರು‌.
ಸುಮಾರು 12, 13 ವರ್ಷಗಳ ಹಿಂದೆ ಕಾಂಗ್ರೆಸ್ ಮತದಾರರ ಬೂತ್ ಆಗಿದ್ದ ಮೇಲಿನಕುರುವಳ್ಳಿಯನ್ನು ಸಂಘಟನೆಯ ಚಾತುರ್ಯದಿಂದ ಬಿಜೆಪಿ ಬೂತ್ ಆಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ದೇವರಾಜ್ ಕೇವಲ 6 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ನಿರಂತರವಾಗಿ ಜನರೊಂದಿಗೆ ಸಂಪರ್ಕ ಹೊಂದಿರುವ ಅವರು ಕೆಲವು ಸಂದರ್ಭಗಳಲ್ಲಿ ಆಪತ್ಬಾಂದವನಂತೆ ಸೇವೆ ಸಲ್ಲಿಸುತ್ತಾರೆ.
ಬಿಜೆಪಿ ಪಕ್ಷಕ್ಕಿಂತಲೂ ಮುಖ್ಯವಾಗಿ ಆರ್ ಎಸ್ ಎಸ್ ವಲಯದಲ್ಲಿ ಗುರುತಿಸಿಕೊಂಡಿದ್ದ ದೇವರಾಜ್ ಅನೇಕ ವರ್ಷಗಳಿಂದ  ಶಾಖೆಗಳನ್ನು ನಿರಂತವಾಗಿ ನಡೆಸಿಕೊಂಡು ಬಂದಿದ್ದರು. ಇಂದಿಗೂ ಈ ಭಾಗದಲ್ಲಿ ದೇವರಾಜ್ ಎಂದರೆ ವ್ಯಕ್ತಿಯಲ್ಲ ಶಕ್ತಿ ಎಂದೇ ಹೇಳಲಾಗುತ್ತದೆ. ತಮಗೆ ವಹಿಸಿದ ಕೆಲಸವನ್ನು ಚಾಚೂತಪ್ಪದೆ ನಿಭಾಯಿಸಿಕೊಂಡು ಬರುವ ಅವರು ತಮ್ಮ ಕೆಲಸಗಳಿಗೆ ಪ್ರಚಾರವನ್ನು ಅಪೇಕ್ಷಿಸುವುದಿಲ್ಲ. ಗೆರಿಲ್ಲಾ ವಾರ್ ಮಾದರಿಯಲ್ಲಿ ಪಕ್ಷವನ್ನಿ‌ ಸದೃಢವಾಗಿ ಕಟ್ಟುತ್ತಿದ್ದರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್ ಎಸ್ ಮಂಜುನಾಥ್ ಗೌಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ , ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ, ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ‌ ಅಧ್ಯಕ್ಷ ಹೊರಬೈಲು ಪ್ರಭಾಕರ್ ಸೇರಿದಂತೆ ಪಂಚಾಯಿತಿ ಸದಸ್ಯರು, ಮುಖಂಡರು ಈ ವೇಳೆ ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post