ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅಸ್ವಸ್ಥರು
ತೀರ್ಥಹಳ್ಳಿಯ ರಾಮೇಶ್ವರ
ಎಳ್ಳಮಾವಾಸ್ಯೆ ಜಾತ್ರೆಯಲ್ಲಿ ಪಾನಿಪೂರಿ, ಗೋಬಿ ಮಂಚೂರಿ ಸೇರಿದಂತೆ ಫಾಸ್ಟ್ ಫುಡ್ ಸೇವಿಸಿದ
ಆರೇಳು ಮಂದಿ ಅಸ್ವಸ್ಥರಾದ ಘಟನೆ ಶುಕ್ರವಾರ ನಡೆದಿದೆ. ತಕ್ಷಣ ಅವರನ್ನು ಜೆ.ಸಿ. ಆಸ್ಪತ್ರೆಗೆ ದಾಖಲಿಸಿ
ಚಿಕಿತ್ಸೆ ಕೊಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎಳ್ಳಮಾವಾಸ್ಯೆ ಜಾತ್ರೆಯಲ್ಲಿ
ಫಾಸ್ಟ್ ಫುಡ್ ಸೇರಿದಂತೆ ಬೀದಿ ಬದಿಯ ತಿಂಡಿ ತಿನಿಸುಗಳ ಗುಣಮಟ್ಟ ಹಾಗೂ ಸುರಕ್ಷತೆಯ ಕುರಿತು
ಈಗ ಪ್ರಶ್ನೆಗಳು ಎದ್ದಿದ್ದು ಪಟ್ಟಣ ಪಂಚಾಯಿತಿ ಆರೋಗ್ಯಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆ
ಕಟ್ಟುನಿಟ್ಟಾದ ತಪಾಸಣೆ ನಡೆಸುವಂತೆ ಆಗ್ರಹ ಕೇಳಿ ಬಂದಿದೆ.
