ಕುವೆಂಪು ಮರೆತ ತಾಲೂಕು ಆಡಳಿತ ಮತ್ತು ಪಟ್ಟಣ ಪಂಚಾಯತ್

ಕುವೆಂಪು ಮರೆತ ತಾಲೂಕು ಆಡಳಿತ ಮತ್ತು ಪಟ್ಟಣ ಪಂಚಾಯತ್
ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆಯನ್ನೇ ತಾಲ್ಲೂಕು ಆಡಳಿತ ಮರೆತು ಬಿಟ್ಟಿದೆ. ಕಡೆ ಪಕ್ಷ ಕುವೆಂಪು ವೃತ್ತದಲ್ಲಿನ ಅವರ ಪ್ರತಿಮೆ ಸ್ವಚ್ಛಗೊಳಿಸುವುದಾಗಲಿ ಅದಕ್ಕೊಂದು ಹಾರ ಹಾಕುವುದಾಗಲಿ ಮಾಡಲಿಲ್ಲ. ದಾರ್ಶನಿಕರ ದಿನಾಚರಣೆಗಳು ತಾಂತ್ರಿಕವಾಗಿ ಆಚರಿಸುವ ವ್ಯವಸ್ಥೆ ಜಾರಿಯಲ್ಲಿ ಇರುವುದರಿಂದ ಪದೇ ಪದೇ ವ್ಯಕ್ತಿತ್ವದ ಅನಾವರಣವನ್ನು ಮಾಡುವಲ್ಲಿ ಆಡಳಿತ ವಿಫಲವಾಗುತ್ತಿದೆ.

ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ಸದಸ್ಯ ಅಣ್ಣಪ್ಪ, ಬಿಜೆಪಿ ಯುವ ಮುಖಂಡ ರಕ್ಷಿತ್ ಮೇಗರವಳ್ಳಿ, ಅನೂಪ್, ಕೊಂಡ್ಲೂರು ಅಭಿ, ವಿನುತ್, ಸೇರಿದಂತೆ ಉತ್ಸಾಹಿ ಹುಡುಗರು ಸೇರಿಕೊಂಡು ಪ್ರತಿಮೆ ಸ್ವಚ್ಛಗೊಳಿಸಿ ಹಾರ ಹಾಕಿ ಕುವೆಂಪು ಜನ್ಮದಿನ ಆಚರಿಸಿದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post