ಆಗುಂಬೆಗೆ ಬಂದ ಮೂರು ಕಾಡಾನೆಗಳು

ಕಾಡಾನೆ ಜೊತೆಗೆ ಹೆಜ್ಜೆ ಇಡುತ್ತಿರುವ ಮರಿಯಾನೆ

ಆಗುಂಬೆ ಸಮೀಪದ ಕಾಡುಗಳಲ್ಲಿ ರಾತ್ರಿ ಮೂರು ಕಾಡಾನೆಗಳು ಕಾಣಿಸಿಕೊಂಡಿದೆ. ಕೆಸರುಕೊಂಡ ಹಾಗೂ ನೇರಲಕೊಡಿಗೆ ಗ್ರಾಮಗಳಲ್ಲಿ ಆನೆ ಸಂಚಾರ ನಡೆಯುತ್ತಿದೆ. ಎರಡು ದೊಡ್ಡ ಕಾಡಾನೆಗಳ ಜೊತೆಗೆ ಮರಿಯಾನೆ ಕೂಡ ಇರುವುದರಿಂದ ಗ್ರಾಮಸ್ಥರು ಜಾಗೃತಿ ಮೂಡಿಸಲಾಗುತ್ತಿದೆ.

ಆಗುಂಬೆ ಗ್ರಾಮ ಪಂಚಾಯಿತಿ, ಅರಣ್ಯ ಇಲಾಖೆ ಕಾಡಾನೆ ಕುರಿತಂತೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ರಾತ್ರಿ ಸಂಚರಿಸದಂತೆ ಎಚ್ಚರಿಕೆ ನೀಡಲಾಗಿದೆ. ಆಗುಂಬೆಯಲ್ಲಿ ಓಡಾಡುತ್ತಿದ್ದ ಕಾಡಾನೆ ಶೃಂಗೇರಿ ಸಮೀಪ ಸೆರೆಯಾದ ಬಳಿಕ ಕಾಡಾನೆ ಸಂಚಾರ ತಪ್ಪುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಆಗುಂಬೆ ಜನರಲ್ಲಿ ಇದೀಗ ಹೊಸ ಆತಂಕ ಆರಂಭಗೊಂಡಿದೆ. ಆಗುಂಬೆ ಕಾಡಾನೆ ಸಂಚಾರ ನಿಲ್ಲಿಸಿರುವುದರಿಂದ ಇತರೆ ಆನೆಗಳು ಈ ಕಡೆಗೆ ಆಕರ್ಷಿತಗೊಳ್ಳುತ್ತಿದೆಯೇ ಎಂಬ ಅನುಮಾನ ದಟ್ಟವಾಗುತ್ತಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post