ನಿವೃತ್ತ ನೌಕರ ಬಿ ರುದ್ರಪ್ಪ ನಿಧನ

ಕೋಣಂದೂರು ಮುರುಘರಾಜ್ ಗೆ ಪಿತೃ ವಿಯೋಗ
ಕಂದಾಯ ಇಲಾಖೆಯ ನಿವೃತ್ತ ನೌಕರರು ತಮ್ಮ ವೃತ್ತಿಯ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿ  ಪ್ರೀತಿಯ ರುದ್ರಣ್ಣರೆಂದು  ಹೆಸರುಗಳಿಸಿದ್ದ ರುದ್ರಪ್ಪನವರು (85) ಮಂಗಳವಾರ ನಿಧನರಾದರು. ಜೋಗ, ತೀರ್ಥಹಳ್ಳಿ, ಹೊಸನಗರದಲ್ಲಿ ಕಾರ್ಯನಿರ್ವಹಿಸಿದ್ದರು. ಬಹು ಅಂಗಾಗ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಇವರು ಪತ್ರಕರ್ತ ಕೋಣಂದೂರು ಮುರುಘರಾಜ್ ತಂದೆ.
ಮಡದಿ, ಮಕ್ಕಳು ಸೊಸೆಯಂದಿರು ಮೊಮ್ಮಕ್ಕಳು ಹಾಗೂ ಅಪಾರ ಬಂಧುವರ್ಗದವರನ್ನ ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಇನ್ನೊರ್ವ ಮಗ ಗಿರೀಶ್ ಕಾರ್ತಿಕೇ ಅವರ ಎನ್,ಆರ್,ಪುರದ ಜಮೀನಿನಲ್ಲಿ ಬುಧವಾರ ನಡೆಯಲಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post