ಜಾನುವಾರು ಸಾಗಾಣೆ ದಂಧೆ ಅವ್ಯಾಹತ

10 ಕ್ಕೂ ಹೆಚ್ಚು ಜಾನುವಾರು ವಶ
ಅರಣ್ಯ ಇಲಾಖೆ ಗಸ್ತು ಪಡೆಯಿಂದ ವಶ
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ರಾತ್ರಿ ಜಾನುವಾರು ಸಾಗಾಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಶುಕ್ರವಾರ ಬೆಳಗ್ಗಿನ ಜಾವ ಶಿವಮೊಗ್ಗ ಕಡೆಗೆ ಸಾಗಾಣೆಯಾಗುತ್ತಿದ್ದ 10ಕ್ಕೂ ಹೆಚ್ಚು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಡಗದ್ದೆ ವಲಯಾರಣ್ಯಾಧಿಕಾರಿ ನೇತೃತ್ವದ ಗಸ್ತು ಪಡೆ ಬೆಳಗ್ಗಿನ ಜಾವ ಜಾನುವಾರು ಕಳ್ಳಸಾಗಣೆ ಮಾಡಲಾಗುತ್ತಿದ್ದ ವಾಹವನ್ನು ಅಡ್ಡಗಟ್ಟಿದೆ. 10ಕ್ಕೂ ಹೆಚ್ಚು ಜಾನುವಾರು, ವಾಹನ ಹಾಗೂ ಇಬ್ಬರು ಆರೋಪಿಗಳನ್ನು ಮಾಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಕ್ರಮ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಾಗ ರಾಜಕೀಯ ಮೇಲಾಟಗಳು ನಡೆಯುತ್ತಿರುತ್ತವೆ. ಎಲ್ಲರು  ಕಳ್ಳದಂಧೆ ನಿಲ್ಲಿಸುವಂತೆ ಗುಟುರ್ ಹಾಕುತ್ತಾರೆ. ಆದರೆ ಇಂದಿಗೂ ಕೂಡ ದಂಧೆ ಮಾತ್ರ ತನ್ನ ಬಾಲವನ್ನು ವ್ಯಾಪಿಸುತ್ತಲೇ ಇದೆ. ಮಾಜಿ ಗೃಹಸಚಿವರ ತವರು ಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ಕಳ್ಳತನವನ್ನು ತಡೆಯುವಲ್ಲಿ ವಿಫಲವಾಗುತ್ತಿದೆ.

ಸಾರ್ವಜನಿಕರು, ವಿವಿಧ ಪಕ್ಷಗಳ ಮುಖಂಡರು ಜಾನುವಾರು ಹಿಡಿದು ಕೊಟ್ಟರೆ ಮಾತ್ರ ಪೊಲೀಸರು ಪ್ರಕರಣ ದಾಖಲಿಸುತ್ತಾರೆ. ಆದರೆ ಪೊಲೀಸ್ ಕಾರ್ಯಾಚರಣೆ ಅಥವಾ ತಪಾಸಣೆ ಮಾತ್ರ ಬಡಪಾಯಿ ಹೆಲ್ಮೆಟ್ ಇಲ್ಲದ ಬೈಕ್ ಸವಾರರ ಮೇಲೆ ನಿತ್ಯ ನಿರಂತರವಾಗಿ ನಡೆಯುತ್ತಿರುತ್ತದೆ ಎಂಬ ಆರೋಪ ಸಾರ್ವಜನಿಕವಾಗಿ ಕೇಳಿ ಬಂದಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post