ಕಿಮ್ಮನೆಗೆ ಸೆಡ್ಡು ಹೊಡೆದ ಭಿನ್ನರು

ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರ ಪಡೆ ಅಸ್ತಿತ್ವಕ್ಕೆ..
ಕೆಬಿಎಸ್ ಕಾಂಪ್ಲೆಕ್ಸ್ ನಲ್ಲಿ ಇಂದು ಪರ್ಯಾಯ ಸಭೆ...??
ಪಟ್ಟಣ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕಾಣಿಸಿಕೊಂಡ ಅಸಮಾಧಾನದ ಹೊಗೆ ಭುಗಿಲಾಗುವ ಸೂಚನೆ ಕಾಣಿಸಿಕೊಂಡಿದೆ. ಬುಧವಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸುದ್ದಿಗೋಷ್ಠಿ ನಡೆಸಿ ಪಟ್ಟಣ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ನಡೆದ ಪ್ರಹಸನಗಳ ಕುರಿತು ಸ್ವಪಕ್ಷಿಯರು ಮತ್ತು ಪರೋಕ್ಷವಾಗಿ ಬಿಜೆಪಿಯ ಓರ್ವ ಮುಖಂಡನ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಅಲ್ಲದೆ ಮೋಸಗಾರರು ಎಂದು ಕುಟುಕಿದ್ದರು.

ಜೊತೆಗೆ ಪ್ರಹಸನದ ಹಿಂದೆ ಲಕ್ಷಾಂತರ ರೂಪಾಯಿಗಳ ಲಂಚದ ಆಮಿಷ ಕೆಲಸ ಮಾಡಿದೆ ಎಂಬ ಗಂಭೀರ ಆರೋಪ ಕೂಡ ಮಾಡಿದ್ದರು. ಎಲ್ಲ ಬೆಳವಣಿಗೆಗಳ ಹಿಂದೆ ಏಕಾಏಕಿ ಭಿನ್ನರು ನಿಷ್ಠಾವಂತರ ಹೆಸರಲ್ಲಿ ಸೆಡ್ಡು ಹೊಡೆದಿರುವುದು ಕುತೂಹಲ ಹುಟ್ಟಿಸಿದೆ. ಮಾರ್ಕೆಟ್ ರಸ್ತೆಯ ಕೆಬಿಎಸ್ ಸಭಾಂಗಣದಲ್ಲಿ ಅಸಮಾಧಾನಿತರ ಸಭೆ ನಡೆಯಲಿದೆ. ಸಭೆಯಲ್ಲಿ ಎಷ್ಟು ಜನ ಅಸಮಾಧಾನಿತ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post