ಆರೋಗ್ಯ ಇಲಾಖಾ ನೌಕರರ ಸಂಘದಿಂದ ವಿಶಿಷ್ಟ ವರ್ಷಾಚರಣೆ

ಯೋಧ ಮತ್ತವರ ಕುಟುಂಬಸ್ಥರಿಗೆ ಗೌರವ

ಭಾರತೀಯ ಸೈನ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೇಕೇರಿಯ ಹೆಮ್ಮೆಯ ಯೋಧ ರಾಕೇಶ್ ಮತ್ತು ಅವರ ಕುಟುಂಬಸ್ಥರನ್ನು ಆತ್ಮೀಯವಾಗಿ ಗೌರವಿಸುವ ಮೂಲಕ ತೀರ್ಥಹಳ್ಳಿ ಆರೋಗ್ಯ ಇಲಾಖಾ ನೌಕರರ ಸಂಘ ನೂತನ ವರ್ಷಾಚರಣೆಯನ್ನು ವಿಶಿಷ್ಟವಾಗಿ ಸಂಭ್ರಮಿಸಿತು.
ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸತೀಶ ಟಿ.ವಿ. ಮಾತನಾಡಿ, ನೂತನ ವರ್ಷಾಚರಣೆಯ ವಿಶೇಷ ದಿನದಂದು ಭಾರತದ ಹೆಮ್ಮೆಯ ಸೈನಿಕರೊಬ್ಬರನ್ನು ಮತ್ತು ಅವರ ಕುಟುಂಬಸ್ಥರನ್ನು ಗೌರವಿಸುವ ಅವಕಾಶ ಸಿಕ್ಕಿರುವುದು ನಮ್ಮ ಸೌಭಾಗ್ಯ. ಭಾರತೀಯ ಯೋಧರ ಅಪಾರ ದೇಶಪ್ರೇಮ, ಶೌರ್ಯ, ಸಾಹಸ, ತ್ಯಾಗ, ಬಲಿದಾನಗಳಿಂದ ದೇಶದ ಪ್ರಜೆಗಳು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಇಂತಹ ಧೀರರನ್ನು ಅವರ ಕುಟುಂಬಸ್ಥರನ್ನು ಗೌರವ ಅಭಿಮಾನದಿಂದ ಕಾಣಬೇಕಾದುದು ಸಮಸ್ತ ಭಾರತೀಯರ ಕರ್ತವ್ಯ ಮಾತ್ರವಲ್ಲ ಅವರ ಋಣ ಸಂದಾಯದ ನಿಟ್ಟಿನಲ್ಲಿ ಪುಟ್ಟ ಪ್ರಯತ್ನವೂ ಹೌದು.   ಸಮ್ಮಾನದ ಮೂಲಕ ತೀರ್ಥಹಳ್ಳಿ ಆರೋಗ್ಯ ಇಲಾಖಾ ನೌಕರರ ಸಂಘ ಭಾರತದ ಹೆಮ್ಮೆಯ ಸಮಸ್ತ ಸೈನಿಕರು ಮತ್ತವರ ಕುಟುಂಬಸ್ಥರಿಗೆ ಧನ್ಯವಾದ ಸಮರ್ಪಿಸುತ್ತಿದೆ. ಅವರೆಲ್ಲರಿಗೂ ಹಾರ್ದಿಕವಾಗಿ ನೂತನ ವರ್ಷದ ಶುಭಾಶಯ ಕೋರುತ್ತಿದೆ ಎಂದರು.
ಸಂದರ್ಭದಲ್ಲಿ ಯೋಧ ಶ್ರೀ ರಾಕೇಶ್ ಮತ್ತು ವೀಣಾ ದಂಪತಿಗಳನ್ನು ಆತ್ಮೀಯವಾಗಿ ಗೌರವಿಸಲಾಯಿತು. ವೈದ್ಯಾಧಿಕಾರಿ ಡಾ.ಸ್ಪಂದನಾ, ಸಂಘದ ಪದಾಧಿಕಾರಿಗಳಾದ ಹನುಮಂತ ರೆಡ್ಡಿ, ಗಿರಿ ಡಿ.ಟಿ., ಸಂಜನಾ ಮತ್ತಿತರರಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post