ತೀರ್ಥಹಳ್ಳಿ ಎಂಐಒ ಆಸ್ಪತ್ರೆಯಲ್ಲಿ ಚಿಕಿತ್ಸೆ

81 ವರ್ಷದ ವೃದ್ಧೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
6 ಕೆ.ಜಿ. ತೂಕದ ಅಂಡಾಶಯ ಗಡ್ಡೆ ತೆರವು

ತೀರ್ಥಹಳ್ಳಿಯ ಆರಗದಲ್ಲಿರುವ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ (MIO) ಆಸ್ಪತ್ರೆಯಲ್ಲಿ 81 ವರ್ಷದ ವೃದ್ಧೆಯೊಬ್ಬರ ದೇಹದಲ್ಲಿ ಬೆಳೆಯುತ್ತಿದ್ದ 40 ಸೆಂ.ಮೀ ಗಾತ್ರದ ಸುಮಾರು 6 ಕೆಜಿ ತೂಕದ ಭಾರೀ ಅಂಡಾಶಯ ಗಡ್ಡೆಯನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮೂಲಕ ತೆರವುಗೊಳಿಸಲಾಗಿದೆ.

ಹೃದಯ ಸಂಬಂಧಿತ ಸಮಸ್ಯೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ವೃದ್ಧೆ ಹೆಚ್ಚಿನ ಅಪಾಯದ ರೋಗಿಯಾಗಿದ್ದರೂ, ಸಮಗ್ರ ವೈದ್ಯಕೀಯ ತಯಾರಿ ಮತ್ತು ತಜ್ಞರ ತಂಡದ ಸಮನ್ವಯದಿಂದ ಸಂಕೀರ್ಣ ಸ್ಟೇಜಿಂಗ್ ಲ್ಯಾಪರೋಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಶಸ್ತ್ರಚಿಕಿತ್ಸೆಯನ್ನು ಮುಖ್ಯ ಶಸ್ತ್ರ ಚಿಕಿತ್ಸಕ ಡಾ. ಸುರೇಶ್ ಕ್ಲೆಮೆಂಟ್ ಡಿಸೋಜ ಅವರ ನೇತೃತ್ವದಲ್ಲಿ ಡಾ.ದಿವ್ಯ ಜ್ಯೋತಿ ಅವರೊಂದಿಗೆ ನಡೆಸಲಾಯಿತು. ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಲಾಗಿದ್ದು, ರೋಗಿಯ ಕುಟುಂಬಕ್ಕೆ ಯಾವುದೇ ಆರ್ಥಿಕ ಭಾರವಾಗಿಲ್ಲ. ಶಸ್ತ್ರಚಿಕಿತ್ಸೆಯ ನಂತರ ರೋಗಿ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತೀರ್ಥಹಳ್ಳಿಯ ಆಂಕಾಲಜಿ ತಂಡದ ಮುಖ್ಯಸ್ಥರಾದ ಡಾ. ಸುರೇಶ್ ರಾವ್ ಅವರು ಮಾತನಾಡಿ, “ ದೊಡ್ಡ ಶಸ್ತ್ರಚಿಕಿತ್ಸೆ ತೀರ್ಥಹಳ್ಳಿಯಂತಹ ಗ್ರಾಮೀಣ ಪ್ರದೇಶದಲ್ಲಿಯೂ ಉನ್ನತ ಮಟ್ಟದ, ಪ್ರೋಟೋಕಾಲ್ ಆಧಾರಿತ ಕ್ಯಾನ್ಸರ್ ಚಿಕಿತ್ಸೆ ನೀಡಲು ಸಾಧ್ಯವೆಂಬುದನ್ನು ಸಾಭೀತುಪಡಿಸಿದೆ. ನಗರ ಮಟ್ಟದ ಚಿಕಿತ್ಸೆ ಈಗ ಗ್ರಾಮೀಣ ಪ್ರದೇಶಗಳಿಗೂ ತಲುಪುತ್ತಿದೆ,” ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆ ಒದಗಿಸುವತ್ತ ಎಂಐಓ ತೀರ್ಥಹಳ್ಳಿ ಕೇಂದ್ರ ಮಹತ್ವದ ಹೆಜ್ಜೆ ಇಟ್ಟಿದೆ ಎಂಬುದು ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಸ್ಪಷ್ಟವಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post