ಮೇಗರವಳ್ಳಿ ಕಾರು ಅಪಘಾತ ಮಹಿಳೆ ಸಾವು

 ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯೂ ಕಾರು

ರಸ್ತೆ ಬದಿ ನಿಂತಿದ್ದ ಕಾರಿಗೆ ಬಿಎಂಡಬ್ಲ್ಯೂಕಾರು ಡಿಕ್ಕಿಯಾದ ಪರಿಣಾಮ ಕಾರಿನೊಳಗಿದ್ದ ಮಹಿಳೆ ಮೃತಪಟ್ಟ ಘಟನೆ ಮೇಗರವಳ್ಳಿಯಲ್ಲಿ ನಡೆದಿದೆ. ಮೇಗರವಳ್ಳಿಯ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ಅರ್ಚಕರಾದ ಅಶೋಕ ಜೋಗಿ ಮತ್ತು ಅವರ ಪತ್ನಿ ಮಲ್ಲಿಕಾ ಅಶೋಕ್ ಜೋಗಿ ಮಂಗಳವಾರ ಬೆಳಿಗ್ಗೆ ತೀವ್ರವಾಗಿ ಗಾಯಗೊಂಡಿದ್ದರು.

ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪತಿ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ತೀವ್ರವಾಗಿ ತಲೆಗೆ ಗಾಯಗೊಂಡಿದ್ದ ಪತ್ನಿ ಮಲ್ಲಿಕಾ ಜೋಗಿ (42) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post