ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್

ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಜೆ.ಎಂ.ಎಫ್.ಸಿ (JMFC) ನ್ಯಾಯಾಲಯ ಆದೇಶ ಹೊರಡಿಸಿದೆ.

​ಮಳಲಿ ಗ್ರಾಮದ ನಿವಾಸಿ, ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿಯಾಗಿದ್ದಾರೆ.

​ಘಟನೆಯ ವಿವರ: ಆರೋಪಿ ರಾಜೇಶ್ ಹಿರಿಮನೆ, ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ 'ಅಸಿಮ್' (ASIM) ಎಂಬುವರ ಫೋಟೋವನ್ನು ಎಡಿಟ್ ಮಾಡಿ ಸೇರಿಸಿದ್ದರು. ಈ ಚಿತ್ರಕ್ಕೆ "ONE AGENDA" ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.
​ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು.

​ನ್ಯಾಯಾಂಗ ಬಂಧನ: ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post