ರಾತ್ರಿ ಕಾರ್ಯಕ್ರಮಗಳ ಉಪಟಳ...

ಕಾನೂನು ಮೀರಿ ಧ್ವನಿ ವರ್ಧಕ ಬಳಕೆ...
ಓದಲಾಗದ ಸಂಕಟದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು
ರಾತ್ರಿ 10 ಗಂಟೆಯ ನಂತರ ಧ್ವನಿ ವರ್ಧಕ ಬಳಕೆಗೆ ಸರ್ಕಾರ ನಿಷೇಧಿಸಿದೆ. ಈ ನಡುವೆ ಗ್ರಾಮೀಣ ಭಾಗದಲ್ಲಿ ಭಾರಿ ಸದ್ದಿನ ಧ್ವನಿ ವರ್ಧಕಗಳು ಬಳಕೆ ಮಾಡಲಾಗುತ್ತಿದೆ. ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಹೆಚ್ಚಾಗಿ ರಾತ್ರಿಯ ವೇಳೆ ಪ್ರದರ್ಶನಗಳು ಏರ್ಪಟ್ಟಿವೆ. ಸದ್ಯ ಪರೀಕ್ಷೆಯ ಸಂದರ್ಭ ಆದ್ದರಿಂದ ಮತ್ತು ಜೀವನದ ಅತ್ಯಂತ ಮಹತ್ವ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಂಡಿದೆ. ರಾತ್ರಿಯ ವೇಳೆ ಧ್ವನಿ ವರ್ಧಕ ಬಳಕೆ ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಓದದೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವುದು ಹೇಗೆ ಎಂಬ ಗಂಭೀರ ಪ್ರಶ್ನೆ ಉದ್ಭವಿಸುತ್ತಿದೆ ಎಂದು ಹಲವು ಪೋಷಕರು ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ.

ವಿವಿಧ ಬಗೆಯ ಕಲೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ. ಕಲಾವಿದರನ್ನು ಗೌರವಿಸುವುದು ಅವರ ಕಲೆಯನ್ನು ಪ್ರೋತ್ಸಾಹಿಸುವುದು ಗೌರವದ ಸಂಕೇತ. ಪರೀಕ್ಷೆಯ ಸಂದರ್ಭ ಹೊರತುಪಡಿಸಿ ಬೇರೆಲ್ಲಾ ಸಮಯದಲ್ಲೂ ಪ್ರದರ್ಶನಕ್ಕೆ ಬೆಂಬಲ ಇದೆ. ಆದರೆ ಇಂದಿನಿಂದ ಎಲ್ಲ ವಿದ್ಯಾರ್ಥಿಗಳ ಜೀವನದ ಬಹುಮುಖ್ಯ ಹಂತವಾದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುತ್ತಿದೆ.
ಇಂತಹ ಸಮಯದಲ್ಲಿ ಬೆಳಗಿನ ಜಾವದ ತನಕ ಅಥವಾ ತಡರಾತ್ರಿವರೆಗೆ ಧ್ವನಿವರ್ಧಕ ಬಳಕೆ ಮಾಡುವುದನ್ನು ಎಲ್ಲಾ ಆಯೋಜಕ ಕುಟುಂಬಗಳು ನಿಯಂತ್ರಿಸಬೇಕು ಎಂದು ಪೋಷಕರು ಒತ್ತಾಯಿಸುತ್ತಿದ್ದಾರೆ.

ಕಾನೂನಿನ ಪ್ರಕಾರ ರಾತ್ರಿ 10 ಗಂಟೆ ಮೇಲೆ ಧ್ವನಿವರ್ಧಕ ಬಳಕೆಗೆ ಅವಕಾಶ ಇಲ್ಲ. ನಿಬಂಧನೆಗೆ ಒಳಪಟ್ಟೆ ಯಕ್ಷಗಾನ,‌ ಸೇರಿದಂತೆ ಎಲ್ಲಾ ಕಲಾ ಪ್ರದರ್ಶನಕ್ಕೆ ಅನುಮತಿ ನೀಡಲಾಗುತ್ತಿದೆ. ಈ ಕುರಿತು ದೂರು ಬಂದಲ್ಲಿ ಕ್ರಮ ಅನಿವಾರ್ಯ ಎಂಬ ಅಭಿಪ್ರಾಯವನ್ನು ಪೊಲೀಸ್ ಇಲಾಖೆ ಹೇಳುತ್ತದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post