ಗಾಯಿತ್ರಿ ಜೋಯಿಸ್ ನಿಧನ

ಗಾಯಿತ್ರಿ ಜೋಯಿಸ್ ನಿಧನ
ಪ್ರಗತಿಪರ ಕೃಷಿಕ ಮುನ್ನೂರು ಗುರುನಾಥ ಜೋಯಿಸ್ ಅವರ ಪತ್ನಿ ಗಾಯಿತ್ರಿ ಜೋಯಿಸ್ (62) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ರಾತ್ರಿ ಸೀಬಿನಕೆರೆಯ ಅವರ ನಿವಾಸದಲ್ಲಿ ನಿಧಹೊಂದಿದ್ದಾರೆ.
ದಶಕಗಳ ಹಿಂದೆಯೇ ಪ್ರಗತಿಪರ ಕೃಷಿಕರೆಂದು ಹೆಸರು ಮಾಡಿದ್ದ ಮತ್ತು ತೀರ್ಥಹಳ್ಳಿ ತುಂಗಾ ಕಾಲೇಜು ಆಡಳಿತ ಮಂಡಳಿ ನಿರ್ದೇಶಕರೂ ಆಗಿದ್ದ ದಿವಂಗತ ಪಾಂಡುರಂಗ ಜೋಯಿಸ್ ಅವರ ಸೊಸೆಯೂ ಆಗಿದ್ದ ಗಾಯಿತ್ರಿ ಅವರು ಗೌಡ ಸಾರಸ್ವತ ಸಮಾಜದಲ್ಲಿ ಚಿರಪರಿಚಿತರಾಗಿ ಗೌರವಕ್ಕೆ ಪಾತ್ರರಾಗಿದ್ದರು. ಅವರ ನಿಧನಕ್ಕೆ ಮುನ್ನೂರು ಗ್ರಾಮಸ್ಥರು, ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಸಂದೇಶ ಜವಳಿ ಸೇರಿದಂತೆ ಅನೇಕರು ತೀವ್ರ ಶೋಕ ವ್ಯಕ್ತ ಪಡಿಸಿದ್ದು ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post