ಚಿತ್ರದುರ್ಗದ ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಪೊಲೀಸರು

ತೀರ್ಥಹಳ್ಳಿ ಮೂಲದ ಸಬ್ ಇನ್ಸ್ಪೆಕ್ಟರ್ ಸಚಿನ್ ಸ್ಥಳದಲ್ಲೇ‌ ಸಾವು
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಭಾನುವಾರ ಬೆಳಿಗ್ಗೆ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್‌ ಸಬ್‌ ಇನ್‌ಸ್ಪೆಕ್ಟರ್‌ಗಳು (ಆರ್‌ಎಸ್‌ಐ) ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಸಬ್‌ ಇನ್‌ಸ್ಪೆಕ್ಟರ್‌ಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

ಆರ್‌ಎಸ್‌ಐಗಳಾದ ಮಂಜುನಾಥ್, ಅಂಬರೀಷ್, ಸಚಿನ್ ಮೃತಪಟ್ಟಿದ್ದಾರೆ. ಸಬ್‌ ಇನ್‌ಸ್ಪೆಕ್ಟರ್‌ಗಳಾದ ಈಶ್ವರ್‌, ಮಹಾಂತೇಶ್‌ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿನ್ (30) ತೀರ್ಥಹಳ್ಳಿ ತಾಲ್ಲೂಕಿನ ಬಿದರಮನೆ ಗ್ರಾಮದ ವೆಂಕಟೇಶ್ ಮತ್ತು ಗುಲಾಬಿ ದಂಪತಿಯ ಪುತ್ರ. ಮೇ 10 ರಂದು ಸಚಿನ್ ಮದುವೆ ನಿಗಧಿಯಾಗಿತ್ತು. ತಂದೆ ಕೂಡ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟಿದ್ದರು.

ಪೊಲೀಸ್‌ ಸಿಬ್ಬಂದಿ ಬೆಂಗಳೂರಿಂದ ಬಳ್ಳಾರಿಗೆ ತೆರಳುವ ವೇಳೆ ಹೆಗ್ಗೆರೆ ಬಳಿ ಎದುರಿನಿಂದ ಬಂದ ಲಾರಿಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯ ನಂತರ 2 ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತ ಸ್ಥಳ ಹಿರಿಯೂರು ತಾಲ್ಲೂಕು ಐಮಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿದ್ದು ಇಲ್ಲಿಯೇ ಪ್ರಕರಣ ದಾಖಲಾಗಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post