ಗೋಪಾಲಗೌಡರ ಸ್ಮಾರಕ ಸ್ಥಾಪನೆಗೆ ಆಗ್ರಹ

ವಿವಿಧ ಬೇಡಿಕೆ ಮುಂದಿಟ್ಟ ಜನ್ಮ ಶತಮಾನೋತ್ಸವ ಸಮಿತಿ

ಸಮಾಜವಾದಿ ಹೋರಾಟಗಾರ ಶಾಂತವೇರಿ ಗೋಪಾಲಗೌಡರ ಹುಟ್ಟೂರು ಆರಗ ಮತ್ತು ಹೋರಾಟ ಭೂಮಿ ಸಾಗರದ ಕಾಗೋಡಿನಲ್ಲಿ ಗೋಪಾಲಗೌಡರ ಸ್ಮಾರಕ ಸ್ಥಾಪಿಸಬೇಕು ಎಂದು ಶಾಂತವೇರಿ ಗೋಪಾಲಗೌಡ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಒತ್ತಾಯಿಸಿತು.

ಬಜೆಟ್‌ನಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಮರುನಾಮಕರಣ ಮಾಡಿರುವ ಕುರಿತು ಸಮಿತಿ ಉಪ ಮುಖ್ಯಮಂತ್ರಿಯನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.

ವಿಧಾನಸೌಧದ ಮುಂಭಾಗದ ಶಾಂತವೇರಿ ಗೋಪಾಲಗೌಡ ವೃತ್ತದಲ್ಲಿ ಅವರ ಆಳೆತ್ತರದ ಪ್ರತಿಮೆ ಸ್ಥಾಪಿಸಬೇಕು. ಬೆಂಗಳೂರಿನಲ್ಲಿ ಸ್ಮಾರಕ ಭವನ ಕಟ್ಟಲು ನಿವೇಶನ ಮಂಜೂರು ಮಾಡಬೇಕು. ಅವರ ಜೀವನದ ಕುರಿತು ಪಠ್ಯ ಪುಸ್ತಕದಲ್ಲಿ ಪಾಠ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

ಪ್ರತಿಷ್ಠಾನದ ಅಧ್ಯಕ್ಷ, ಶಾಸಕ ಆರಗ ಜ್ಞಾನೇಂದ್ರ, ಉಪಾಧ್ಯಕ್ಷರು ಜಿ.ಎ. ಪುರುಷೋತ್ತಮ ಗೌಡ, ಕಾರ್ಯದರ್ಶಿ ರಾಮಮನೋಹರ ಶಾಂತವೇರಿ, ಸದಸ್ಯರಾದ ಮಣಿ ಹೆಗ್ಡೆ, ರಾಜಣ್ಣ, ಆಶಾ ಬಾಲರಾಜ್‌, ಇಳಿಮನೆ ವನಮಾಲಯ್ಯ (ಉಮೇಶ್) ಮತ್ತಿತರರು ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post