ನಾಬಳ ಅಚಲ ಹೆಗ್ಡೆ ನಿಧನ

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಚೀಂದ್ರ ಹೆಗ್ಡೆ ಪತ್ನಿ
ತೀರ್ಥಹಳ್ಳಿ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ, ಹೊನ್ನೇತ್ತಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ನಾಬಳ ಶಚಿಂದ್ರ ಹೆಗ್ಡೆ ಧರ್ಮಪತ್ನಿ ಅಚಲ ಹೆಗ್ಡೆ (52) ಮಂಗಳವಾರ ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಶಾಲಾ ಕಾಲೇಜು ದಿನಗಳಲ್ಲಿ ಅತ್ಯುತ್ತಮ ಕೋಕೋ ಆಟಗಾರ್ತಿಯಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದ ಅಚಲ ಅವರು ಕೊಡಚಾದ್ರಿ ಮಹಿಳಾ ಪತ್ತಿನ ಸಹಕಾರ ಸಂಘ, ಅನಘ ಮಹಿಳಾ ಸಹಕಾರ ಸಂಘದ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಲವು ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತ ಕ್ರಿಯಾಶೀಲರಾಗಿದ್ದರು.
ಅವರು ಪತಿ, ಇಬ್ಬರು ಮಕ್ಕಳು, ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.
ಅತ್ಯಂತ ಸಜ್ಜನ ಹಾಗೂ ಘನತೆಯ ವ್ಯಕ್ತಿತ್ವದಿಂದ ಎಲ್ಲರ ಗೌರವಕ್ಕೆ ಪಾತ್ರರಾಗಿರುವ ಶಚಿಂದ್ರ ಹೆಗ್ಡೆ ಯವರಿಗೆ ಅನಿರೀಕ್ಷಿತವಾಗಿ ಎರಗಿರುವ  ಈ ಅಘಾತಕ್ಕೆ ಅವರ ಆಪ್ತರು, ಹಿತೈಷಿಗಳು, ಬಂಧು ವರ್ಗ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದು ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post