ಎಸ್ಪಿಗೆ ದೂರು ಸಲ್ಲಿಸಿದ ಜಿಲ್ಲಾ ಯುವ ಕಾಂಗ್ರೆಸ್
ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಅವಹೇಳನಕಾರಿ ಶಬ್ದಗಳಿಂದ ನಿಂದಿಸಿರುವ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ರಾಜ್ಯ ಜವಳಿ ನಿಗಮ ಮಂಡಳಿಯ ಅಧ್ಯಕ್ಷ ಚೇತನ್ ಗೌಡ, ಹಾಪ್ ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್, ಯುವ ಮುಖಂಡರಾದ ಮಧುಸೂದನ್, ಅರುಣ್ ನಾಯ್ಡು, ಯುವ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ಮಲವಗೊಪ್ಪ ಶಿವು, ಗೌತಮ್, ಚಂದ್ರೋಜಿರಾವ್ ಹಲವಾರು ಯುವ ಮುಖಂಡರು ಪಾಲ್ಗೊಂಡು ದೂರು ದಾಖಲಿಸಿದರು.