ತೂದೂರು ಸಮೀಪದ ಮನೆಯಲ್ಲಿ ಘಟನೆ
ತೀರ್ಥಹಳ್ಳಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 169 ಎ ಮಾರ್ಗ ಮಧ್ಯೆಯ ತೂದೂರು ಸಮೀಪದ ಗುತ್ತಿಯಡೇಹಳ್ಳಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಸುಮಾರು 25 ಲಕ್ಷ ವೆಚ್ಚದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಮನೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿರುವ ಸಂದರ್ಭವನ್ನು ಗಮನಿಸಿದ ಕಳ್ಳರು ಮನೆಯಲ್ಲಿದ್ದ ಒಡವೆಗಳನ್ನು ಕದ್ದೊಯ್ದಿದ್ದಾರೆ. ಒಟ್ಟು ಒಡವೆಗಳ ಮೌಲ್ಯ ಸುಮಾರು 25 ಲಕ್ಷ ಎಂದು ಅಂದಾಜಿಸಲಾಗಿದ್ದು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.