ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್‌ ಚೀಪ್‌ ಮ್ಯಾನೇಜರ್‌ ಆಗಿ ಯಡೂರು ರಾಘವೇಂದ್ರ ಜೋಯ್ಸ್‌

ಬಹುತೇಕ ಕನ್ನಡಿಗರು ಸ್ಥಾಪಿಸಿದ ಬ್ಯಾಂಕುಗಳಲ್ಲಿ ಅತ್ಯುತ್ತಮ ವ್ಯವಹಾರದೊಂದಿಗೆ ಈಗಲೂ ಪ್ರತಿಷ್ಠೆ ಉಳಿಸಿಕೊಂಡಿರುವ ಕರ್ಣಾಟಕ ಬ್ಯಾಂಕ್‌ ಚೀಪ್‌ ಮ್ಯಾನೇಜರ್‌ ಆಗಿ ರಾಘವೇಂದ್ರ ಜೋಯ್ಸ್‌ ಬಡ್ತಿ ಹೊಂದಿದ್ದಾರೆ. ಮೂಲತಃ ಯಡೂರು ಜೋಯ್ಸ್‌ ಕುಟುಂಬದ ರಾಘವೇಂದ್ರ ತಮ್ಮ ಹೈಸ್ಕೂಲ್‌ ವಿದ್ಯಾಭ್ಯಾಸವನ್ನು ಡಾ.ಯು.ಆರ್.ಅನಂತಮೂರ್ತಿ ಪ್ರೌಢಶಾಲೆ ಹಾಗೂ ಪದವಿ ವ್ಯಾಸಂಗವನ್ನು ತುಂಗಾ ಕಾಲೇಜಿನಲ್ಲಿ ಪೂರೈಸಿದ್ದಾರೆ. ರಾಘವೇಂದ್ರ ಜೋಯ್ಸ್‌ ಉತ್ತಮ ಹವ್ಯಾಸಿ ಲೇಖಕನಾಗಿಯೂ ಗಮನ ಸೆಳೆದವರಾಗಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post