ಮಾಜಿ ಗ್ರಾಮ ಪಂಚಾಯತ್ ಸದಸ್ಯ ನಾಗರಾಜ್ ಶೆಟ್ಟಿ ನಿಧನ

ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ನಾಗರಾಜ್ ಶೆಟ್ಟಿ (62) ದೀರ್ಘ ಕಾಲದ ಅನಾರೋಗ್ಯದ ಬಳಿಕ ನಿಧನರಾಗಿದ್ದಾರೆ.
ಕೆಂಚಾಂಬಾ ಲಾರಿ ಮಾಲೀಕ ಶಂಕರ್ ಶೆಟ್ಟಿ ಸಹೋದರರಲ್ಲಿ ಒಬ್ಬರಾಗಿದ್ದ ನಾಗರಾಜ್ ಶೆಟ್ಟಿ ತೀರ್ಥಹಳ್ಳಿ ಕುವೆಂಪು ವೃತ್ತದಲ್ಲಿ ರಿಕ್ಷಾ ಮಾಲೀಕ, ಚಾಲಕನಾಗಿ ಉತ್ತಮ ಹೆಸರು ಮಾಡಿದ್ದರು. ಅಲ್ಲದೆ ಗ್ರಾಮ ಪಂಚಾಯತ್ ಸದಸ್ಯನಾಗಿ ಜನಪರ ಸ್ಪಂದನೆ ಮೂಲಕ ಹೆಸರಾಗಿದ್ದರು. ಕೆಲವು ಸಮಯದ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಅವರು ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು.
ಅವರು ಪತ್ನಿ, ಪುತ್ರ, ಪುತ್ರಿ, ಸಹೋದರರು, ಸಹೋದರಿಯರು ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ  10 ಗಂಟೆಗೆ ನೆರವೇರಲಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post