ಮಾಜಿ ಶಾಸಕ ಲಿಂಗಪ್ಪ ಆಸ್ಪತ್ರೆಗೆ ದಾಖಲು
ತೀರ್ಥಹಳ್ಳಿಯ ಮಾಜಿ ಶಾಸಕ, ಹಿರಿಯ ಸಮಾಜವಾದಿ ಕೋಣಂದೂರು ಲಿಂಗಪ್ಪ ಅಸ್ವಸ್ಥರಾಗಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋ ಸಹಜ ಅನಾರೋಗ್ಯದಿಂದ ಅಸ್ವಸ್ಥರಾಗಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಕುಟುಂಬದ ಮೂಲದಿಂದ ದೊರೆತಿದೆ.