ಹುಲಿಕಲ್‌ ಘಾಟಿ ವಾಲ್ ಕುಸಿತ

4 ಮಂದಿ ಸಾವು ಶಂಕೆ, ಮೂವರಿಗೆ ಗಂಭೀರ ಗಾಯ

ಹುಲಿಕಲ್ಲು ಘಾಟಿ ದುರಸ್ಥಿ ಕಾಮಗಾರಿ ವೇಳೆ ವಾಲ್‌ ಕುಸಿತಗೊಂಡಿದ್ದು 4 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

2025ರ ಮಳೆಗಾಲದ ವೇಳ ಮೊದಲ ಘಾಟಿಯಲ್ಲಿ ಭಾರಿ ಪ್ರಮಾಣದ ಕುಸಿತ ಉಂಟಾಗಿತ್ತು. ಘಾಟಿಯ ಮೇಲ್ಭಾಗದಲ್ಲಿ ತಡೆಗೋಡೆ ನಿರ್ಮಿಸಿ ಘಾಟಿಯನ್ನು ಬಂದೋಬಸ್ತ್‌ ಮಾಡುವ ಕಾಮಗಾರಿ ಪ್ರಗತಿ ಹಂತದಲ್ಲಿತ್ತು. ದುರಸ್ಥಿ ಕಾಮಗಾರಿಯ ಸ್ಥಳದಲ್ಲಿ 7 ಮಂದಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕಾಮಗಾರಿಯ ಮೇಲುಸ್ತುವಾರಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post