ಪಿಯುಸಿಯಲ್ಲಿ ಪ್ರಾಣದೀಪ್‌, ಆರ್ಯನ್‌ ಉತ್ತಮ ಸಾಧನೆ

ಹೆಬ್ರಿಯ ಎಸ್.ಆರ್.ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಪ್ರಾಣದೀಪ್ ಟಿ. ಯು 600 ಅಂಕಗಳಿಗೆ 593 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದಿದ್ದಾನೆ. ಪ್ರಾಣದೀಪ್‌ ಉಮೇಶ್ ಕಂಪ್ಯೂಟರ್ಸ್ ಮಾಲೀಕರಾದ ಉಮೇಶ್ ಬಿ.ಆರ್., ಮಮತಾ ಬಿ.ಎಸ್. ದಂಪತಿಗಳ ದ್ವಿತೀಯ ಪುತ್ರ.

ಕುಂದಾಪುರದ ಎಕ್ಸಲೆಂಟ್‌ ಕಾಲೇಜು ಸುಣ್ಣಾರಿಯ ವಿಜ್ಞಾನ ವಿಭಾಗದಲ್ಲಿ ಕುರುವಳ್ಳಿಯ ಆರ್ಯನ್‌ ಶೇಕಡಾ 96 ಪಡೆದು ಉತ್ತಮ ಸಾಧನೆ ಮಾಡಿದ್ದಾನೆ. ವಾಲಿಬಾಲ್ ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಈಗಾಗಲೇ ಆಡಿರುವ ಆರ್ಯನ್‌ ಕುರುವಳ್ಳಿಯ ಅನಿಲ್‌ ಹೆಚ್.ಪಿ. ಹಾಗೂ ರಮ್ಯ ದಂಪತಿಯ ಪುತ್ರ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post