ಅಡಿಕೆ ಮರಬಿದ್ದು ಸವಾರ ಸಾವು

ಗಾಂಧಿನಗರ ನಿವಾಸಿ ಮಾಯಕಣ್ಣನ್‌ ಸಾವು

ತೀರ್ಥಹಳ್ಳಿಯ ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಸರ – ಬಾಳಗಾರು ಸಂಪರ್ಕದ ರಸ್ತೆಯ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರ್ಮಿಕ ಮಾಯಕಣ್ಣನ್‌ (61) ಶನಿವಾರ ಅಡಿಕೆ ಮರ ತಲೆಯ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ.

ಪಟ್ಟಣದ ಗಾಂಧಿನಗರ ಕೆರೆಯ ಸಮೀಪದ ಮನೆಯನ್ನು ಹೊಂದಿರುವ ಕಲ್ಲು ಕಾರ್ಮಿಕ ಕಲ್ಲತ್ತಿ ಸಮೀಪದ ಮನೆಯೊಂದಕ್ಕೆ ಹಾಕಿರುವ ಕಲ್ಲಿನ ಹಣ ಪಡೆದು ವಾಪಾಸ್ಸಾಗುತ್ತಿದ್ದರು. ಅಬ್ಬಿಗದ್ದೆಯ ತೋಟದಲ್ಲಿ ಹಳೆಯ ಅಡಿಕೆ ಮರಗಳನ್ನು ತೆರವು ಮಾಡುವ ಸಂಬಂಧ ಮರಗಳನ್ನು ಕಡಿಯುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಅಡಿಕೆ ಮರವೊಂದು ರಸ್ತೆಗೆ ವಾಲಿದೆ. ಸ್ಥಳದಲ್ಲಿಯೇ ಸಂಚರಿಸುತ್ತಿದ್ದ ಮಾಯಕಣ್ಣನ್‌ ತಲೆಯ ಮೇಲೆ ಬಿದ್ದಿದೆ. ಅಡಿಕೆ ಮರಬಿದ್ದ ರಭಸಕ್ಕೆ ಸ್ಥಳದಲ್ಲಿಯೇ ಮಾಯಕಣ್ಣನ್‌ ಅಸುನೀಗಿದ್ದಾರೆ. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post