ಮರುಪರೀಕ್ಷೆ ಬರೆದು ಸಾಧನೆಗೈದ ಅಭಿಜ್ಞಾ ಆರ್. ಕಶ್ಯಪ್

ಎಸ್.ಎಸ್.ಎಲ್ಸಿಯಲ್ಲಿ ತೀರ್ಥಹಳ್ಳಿಗೆ ದ್ವಿತೀಯ ಸ್ಥಾನ ಪಡೆದ ಅಭಿಜ್ಞಾ
2025-26 ಸಾಲಿನ ಎಸ್.ಸ್.ಎಲ್.ಸಿ. ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಹೆಚ್ಚು ಅಂಕ ಬಾರದ ಕಾರಣ ಮರುಪರೀಕ್ಷೆ ಬರೆದ ತಾಲೂಕಿನ ಚಿಟ್ಟೆಬಯಲು ಪ್ರಜ್ಞಾಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಭಿಜ್ಞಾ ಆರ್. ಕಶ್ಯಪ್ 618 ಅಂಕ ಪಡೆದು ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದುಕೊಂಡಿದ್ದಾಳೆ.

ಈ ವಿಧ್ಯಾರ್ಥಿನಿ ಮಾರ್ಚ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ 578 ಅಂಕ ಪಡೆದಿದ್ದಳು. ನಂತರ ಮರುಮೌಲ್ಯಮಾಪನದಲ್ಲಿ 603 ಅಂಕ ಪಡೆದಳು. ಮತ್ತೆ ಮೇ ತಿಂಗಳಲ್ಲಿ  ಮರುಪರೀಕ್ಷೆ ಬರೆದು 618 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಜೊತೆಗೆ ತೀರ್ಥಹಳ್ಳಿ ತಾಲೂಕಿಗೆ ಎರಡನೇ ರ್ಯಾಂಕ್ ಗಿಟ್ಟಿಸಿಕೊಂಡಿದ್ದಾಳೆ.
ಅಭಿಜ್ಞಾ ಅರಳಾಪುರ ಸಮೀಪದ ಕರಿಮನೆ ಕೆ.ಎಂ. ರಾಘವೇಂದ್ರ, ಶೋಭಿತಾ ದಂಪತಿಗಳ ಪುತ್ರಿ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post