ಎಸ್ಐಆರ್ ಸಮಿತಿ ಸದಸ್ಯರಾಗಿ ಕಿಮ್ಮನೆ ರತ್ನಾಕರ್


ಚುನಾವಣೆ ಆಯೋಗ ನಡೆಸುತ್ತಿರುವ ಎಸ್ ಐ ಆರ್ (ವಿಶೇಷ ತೀವ್ರ ಮತ ಪರಿಷ್ಕರಣೆ ) ವಿವಾದದ ಕೇಂದ್ರ ಬಿಂದುವಾಗಿದೆ.ಇದು ಮುಸ್ಲಿಂ ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕನ್ನು ನಿರಾಕರಿಸುತ್ತಿದೆ ಎಂಬುದು ಇಂಡಿಯಾ ಮೈತ್ರಿ ಕೂಟದ ಆರೋಪವಾಗಿದೆ.
ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭಾರಿ ಅಂತರದಲ್ಲಿ ವಿಜಯ ಸಾಧಿಸಿದ ಬಳಿಕ ಎಸ್ ಐ ಆರ್ ಕುರಿತು ಬಿಜೆಪಿಯೆತರ ವಿಪಕ್ಷಗಳು ಎಚ್ಚರಿಕೆ ವಹಿಸುತ್ತಿವೆ.
ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ ಇದರ ವಿರುದ್ಧ ಕಣ್ ಗಾವಲು ಸಮಿತಿ ರಚಿಸಿದೆ.
ಮಾಜಿ ಸಚಿವ ವಿನಯ್ ಕುಮಾರ ಸೊರಕೆ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಕಿಮ್ಮನೆ ರತ್ನಾಕರ್ ಕೆ ಪಿ ಸಿ ಸಿ ಉಪಾಧ್ಯಕ್ಷ ಬಿ ಎಲ್ ಶಂಕರ್, ವಕೀಲ, ಪತ್ರ ಕರ್ತ ಸಿ ಎಸ್ ದ್ವಾರಕನಾಥ್, ಮಾಜಿ ಸಚಿವ ಜಯ ಪ್ರಕಾಶ್ ಹೆಗಡೆ,ಎಲ್ ಹನುಮಂತಯ್ಯ, ಮಾಜಿ ಸಚಿವ ಉಗ್ರಪ್ಪ ಸೇರಿದಂತೆ 28 ಮಂದಿ ಕಾರ್ಯ ನಿರ್ವಹಿಸಲಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post