ಮರೆಯಲಾಗದ ಎಸ್.ಎಂ.ಕೃಷ್ಣ ಸಂಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ
ಮಂಡ್ಯ ಕರ್ನಾಟಕ
ಸಂಘದ ವತಿಯಿಂದ ನೀಡುವ ಪ್ರಥಮ ವರ್ಷದ ಎಸ್.ಎಂ.ಕೃಷ್ಣ ಪ್ರಶಸ್ತಿಯನ್ನು ಮಾಜಿ ಸಚಿವ ಕಿಮ್ಮನೆ ರತ್ನಾಕರ
ಮಂಗಳವಾರ ಮಂಡ್ಯದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಮರೆಯಲಾಗದ ಎಸ್.ಎಂ.ಕೃಷ್ಣ ಸಂಸ್ಮರಣೆ
ಸಮಾರಂಭದಲ್ಲಿ ಸ್ವೀಕರಿಸಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಿನ್ಲಲಿ ಅವರ ಹಿತೈಷಿಗಳು ಕರ್ನಾಟಕ ಸಂಘದೊಂದಿಗೆ ಕೂಡಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ರಾಜಕೀಯ, ಸಂಗೀತ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ₹50 ಸಾವಿರ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
ತೀರ್ಥಹಳ್ಳಿಯ ಕಿಮ್ಮನೆ
ರತ್ನಾಕರ್ ಶುದ್ಧ ರಾಜಕಾರಣಕ್ಕೆ ಹೆಸರಾಗಿದ್ದಾರೆ. 2008ರಲ್ಲಿ ಮೊದಲ ಬಾರಿಗೆ ಶಾಸಕರಾಗಿ, 2013ರಲ್ಲಿ
2ನೇ ಬಾರಿಗೆ ಆಯ್ಕೆಗೊಂಡು ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಸಚಿವರಾಗಿ ಶಿಕ್ಷಣದ ಸುಧಾರಣೆ ಮತ್ತು ಆಧುನೀಕರಣಕ್ಕೆ ಶ್ರಮಿಸಿದ್ದಾರೆ ಎಂಬ ಕಾರಣದಿಂದ ಪ್ರಶಸ್ತಿ
ನೀಡಲಾಗುತ್ತಿದೆ ಎಂದು ಸಂಘದ ಅಧಯಕ್ಷ ಪ್ರೊ.ಜಯಪ್ರಕಾಶಗೌಡ ಹೇಳಿದರು.

