ನೂತನ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಭೇಟಿ

ತೀರ್ಥಹಳ್ಳಿ ಕಾಂಗ್ರೆಸ್‌ ಮುಖಂಡರಿಂದ ಅಭಿನಂದನೆ

ನೂತನ ಕೆಪಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಐಸಿಸಿ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಹಾರೋಗೊಳಿಗೆ ಪದ್ಮನಾಭ, ಟಿ.ಎಲ್.ಸುಂದರೇಶ್‌, ಪಟ್ಟಣ ಪಂಚಾಯಿತಿ ನಾಮ ನಿರ್ದೇಶನ ಸದಸ್ಯ ಬಿ.ಆರ್.ರಾಘವೇಂದ್ರ ಶೆಟ್ಟಿ, ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ನಾಬಳ ಶಚೀಂದ್ರ ಹೆಗ್ಡೆ ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಕೆಲವು ಕಾಲ ಇವರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್‌ ಪಕ್ಷದ ಸಂಘಟನೆ ಮತ್ತು ಕಾಂಗ್ರೆಸ್‌ ಕಾರ್ಯಕ್ರಮಗಳ ಕುರಿತು ಹೆಚ್ಚಿನ ಮುತುರ್ವಜಿ ವಹಿಸಿ ಪ್ರಚಾರ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post