ನೆಮ್ಮದಿ ಕೇಂದ್ರಕ್ಕೆ ಮುತ್ತಿಗೆ ಎಚ್ಚರಿಕೆ

ಬೆಜ್ಜವಳ್ಳಿ ಗ್ರಾ.ಪಂ. ಎದುರು ಬಿಜೆಪಿ ಯುವ ಮೋರ್ಚಾ ಧಿಡೀರ್ ಪ್ರತಿಭಟನೆ

ಕೇಂದ್ರ ಸರ್ಕಾರದ ಬೆಳೆ ವಿಮೆ ಯೋಜನೆಯ ಲಾಭ ಪಡೆಯಲು ಮಳೆ ಮಾಪನ ಯಂತ್ರದ ದೋಷವೇ ರೈತರಿಗೆ ಮುಳುವಾಗಿದೆ ಎಂದು ಆರೋಪಿಸಿ, ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂಭಾಗ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ಹಾರಿಕೆ ಉತ್ತರಗಳ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಸ್ಥಳದಲ್ಲೇ ಧಿಡೀರ್ ಧರಣಿ ನಡೆಸಿ ರೈತರ ಪರವಾಗಿ ನ್ಯಾಯಕ್ಕೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗಬಡಿ ಮಾತನಾಡಿ ರೈತರ ಕಷ್ಟಕಾಲಕ್ಕೆ ನೆರವಾಗಲೆಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಬೆಳೆ ವಿಮೆ ಯೋಜನೆಯು ಆಯಾ ಭಾಗದ ಮಳೆಯ ಪ್ರಮಾಣವನ್ನು ಆಧರಿಸಿ ಕಾರ್ಯನಿರ್ವಹಿಸುತ್ತದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಮಳೆ ಮಾಪನ ಯಂತ್ರದ ವರದಿಯ ಆಧಾರದ ಮೇಲೆ ರೈತರಿಗೆ ಪರಿಹಾರ ಧನ ಬಿಡುಗಡೆಯಾಗುತ್ತದೆ. ಆದರೆ, ಬೆಜ್ಜವಳ್ಳಿ ಪಂಚಾಯಿತಿಯಲ್ಲಿ ಈ ಮಾಪನ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟಿದೆ ಎಂದರು,

ಅಷ್ಟೇ ಅಲ್ಲದೆ ಯಂತ್ರ ಹಾಳಾಗಿ ಒಂದು ವರ್ಷ ಕಳೆದಿದೆ. ಆದರೂ ಹಾಳಾಗಿರುವ ಮಳೆ ಮಾಪನ ಯಂತ್ರವನ್ನು ದುರಸ್ತಿ ಪಡಿಸದೆ ಈ ಸಾಲಿನಲ್ಲೂ ಇದೇ ತಾಂತ್ರಿಕ ದೋಷ ಮುಂದುವರಿದಿದೆ. ಇದನ್ನು ಗಮನಿಸಿದ ಪಂಚಾಯಿತಿಗೆ ಬೇಟಿನೀಡಿ ಅಧಿಕಾರಿಗಳನ್ನು ಪ್ರಶ್ನಿಸಿದಾಗ. ಈ ವೇಳೆ ಅಧಿಕಾರಿಗಳು ಸಮರ್ಪಕ ಪ್ರತಿಕ್ರಿಯೆ ನೀಡುತ್ತಿಲ್ಲ. ಮುಂಬರುವ ದಿನಗಳಲ್ಲೂ ರೈತರಿಗೆ ವಿಮೆ ಹಣ ಬರದೇ ಹೋದರೆ ರೈತರನ್ನು ಒಗ್ಗೂಡಿಸಿ ಸರ್ಕಾರಿ ನೆಮ್ಮದಿ ಕೇಂದ್ರಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗಬಡಿ, ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ, ಸಾತ್ವಿಕ ಉದಯಪುರ, ತನಿಕಲ್ ಪ್ರಸನ್ನ, ಸುದೀಪ್ ಒಳಗೇರಿ, ಸುದೀಪ್ ದಬ್ಬಣಗದ್ದೆ, ಪ್ರದೀಪ್ ಕೂಡಿಗೆ, ಸತ್ಯನಾರಾಯಣ ಕೂಡಿಗೆ ಇನ್ನೂ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post